• 7 ಡಿಸೆಂಬರ್ 2024

ಪಟ್ಟೆ ಪ್ರತಿಭಾ ಪ್ರೌಢ ಶಾಲೆಯ ವಿದ್ಯಾರ್ಥಿನಿ ತನುಶ್ರೀ ರೈ ಗುಂಡೆಸೆತದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ:

 ಪಟ್ಟೆ ಪ್ರತಿಭಾ ಪ್ರೌಢ ಶಾಲೆಯ ವಿದ್ಯಾರ್ಥಿನಿ ತನುಶ್ರೀ ರೈ ಗುಂಡೆಸೆತದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ:
Digiqole Ad

ಪಟ್ಟೆ ಪ್ರತಿಭಾ ಪ್ರೌಢ ಶಾಲೆಯ ವಿದ್ಯಾರ್ಥಿನಿ ತನುಶ್ರೀ ರೈ ಗುಂಡೆಸೆತದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ:

ಪುತ್ತೂರು: ಕೋಲಾರ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾಕೂಟದ ಗುಂಡೆಸೆತ ಸ್ಪರ್ಧೆಯಲ್ಲಿ ಬಡಗನ್ನೂರು ಗ್ರಾಮದ ಪಟ್ಟೆ ಪ್ರತಿಭಾ ಪ್ರೌಢ ಶಾಲೆಯ 10 ನೇ ತರಗತಿ ವಿದ್ಯಾರ್ಥಿನಿ ತನುಶ್ರೀ ರೈ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅಕ್ಟೋಬರ್ ನಲ್ಲಿ ಸಾಂದೀಪನಿ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ 17 ರ ವಯೋಮಾನದ ಬಾಲಕಿಯರ ಗುಂಡು ಎಸೆತದಲ್ಲಿ ತನುಶ್ರೀ ಅವರು 11.55 ಮೀಟರ್ ಗುಂಡು ಎಸೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ನವೆಂಬರ್ 4 ಮತ್ತು 5 ರಂದು ಮಂಗಳೂರು ಮಂಗಳ ಸ್ಟೇಡಿಯಂನಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ 11.44 ಮೀಟರ್ ದೂರ ಗುಂಡು ಎಸೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು. ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ 11.87 ಮೀಟರ್ ಗುಂಡು ಎಸೆದು ಪ್ರಥಮ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ಇದೀಗ ಸತತ ಎರಡನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ