• 14 ಫೆಬ್ರವರಿ 2025

ನೆಟ್ಟಣಿಗೆ ಮುಡ್ನೂರು ಮೈರೋಳು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

 ನೆಟ್ಟಣಿಗೆ ಮುಡ್ನೂರು ಮೈರೋಳು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ
Digiqole Ad

ನೆಟ್ಟಣಿಗೆ ಮುಡ್ನೂರು ಮೈರೋಳು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಈಶ್ವರಮಂಗಲ : ನೆಟ್ಟಣಿಗೆ ಮುಡ್ನೂರು ಮೈರೋಳು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಆಚರಣೆ ಮಾಡಲಾಯಿತು
ಮಕ್ಕಳ ಬಗ್ಗೆ ಅಪಾರ ಪ್ರೀತಿಯನ್ನು ಹೊಂದಿದ್ದ ನೆಹರುರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ರೂಪಾವಾಣಿಯವರು ಮಾತನಾಡಿ ನೆಹರು ಅವರಿಗೆ ಇರುವ ಮಕ್ಕಳ ಬಗೆಗಿನ ಅಪಾರ ಪ್ರೇಮದ ಪ್ರತೀಕವಾಗಿ ಅವರ ಹುಟ್ಟುಹಬ್ಬವನ್ನು ಮಕ್ಕಳ ದಿನಾಚರಣೆ ಎಂದು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷರಾಗಿ ಬಾಲ ವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಶಾರದ.ಕೆ ,ಗ್ರಾಮ ಪಂಚಾಯತ್ ಸದಸ್ಯರಾದ ಪ್ರದೀಪ್ , ಆಶಾ ಕಾರ್ಯಕರ್ತೆ ಶ್ರೀಮತಿ ಪದ್ಮಾವತಿ , ಬಾಲವಿಕಾಸ ಸಮಿತಿಯ ಪುಷ್ಪಾವತಿ , ಬಾಬು ಮೈರೋಳು , ಮಕ್ಕಳ ಪೋಷಕರು ಮತ್ತು ಸಂಘದ ಸದಸ್ಯರು ಹಾಜರಿದ್ದರು
ಅಂಗನವಾಡಿಗೆ ಎಲ್ಲಾ ರೀತಿಯಲ್ಲೂ ಸಹಕರಿಸಿದ ಗ್ರಾಮ ಪಂಚಾಯತ್ ಸದಸ್ಯ ಶ್ರೀ ಪ್ರದೀಪ್ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು

ಅಟೋಟ ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು
ಶ್ರೀಮತಿ ನಳಿನಿ ಕಾರ್ಯಕ್ರಮವನ್ನು ಸ್ವಾಗತಿಸಿ , ಶ್ರೀಮತಿ ಪುಷ್ಪಾವತಿ ಕಾರ್ಯಕ್ರಮ ಧನ್ಯವಾದವಿತ್ತರು

Digiqole Ad

ಈ ಸುದ್ದಿಗಳನ್ನೂ ಓದಿ