• 7 ಡಿಸೆಂಬರ್ 2024

ಕನಕದಾಸರ ಜೀವನ ಶೈಲಿ ಕುರಿತು ಮಾಹಿತಿ ಇಲ್ಲಿದೆ 👇

 ಕನಕದಾಸರ ಜೀವನ ಶೈಲಿ ಕುರಿತು ಮಾಹಿತಿ ಇಲ್ಲಿದೆ 👇
Digiqole Ad

ಕನಕದಾಸರ ಜೀವನ ಶೈಲಿ ಕುರಿತು ಮಾಹಿತಿ ಇಲ್ಲಿದೆ 👇

ಕನಕದಾಸರು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದಲ್ಲಿ 1509ರಲ್ಲಿ ಹಿಂದೂ ಕುರುಬ/ನಾಯಕ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು. ಕನಕದಾಸರು ಬರಿ ಒಂದು ಜಾತಿಗೇ ಸೀಮಿತವಾದ ಭಕ್ತರಲ್ಲ ಎಲ್ಲಾ ಜಾತಿಗಳಿಗೆ ಬೇಕಾದವರು. 15 – 16 ನೆಯ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಸಮರ ಸಾರಿದ ಭಕ್ತ ಎಂದರೆ ಕನಕದಾಸರು ಎಂದರೆ ತಪ್ಪಾಗಲಾರದು. ಕನಕದಾಸರು ಅನೇಕ ಕೀರ್ತನೆಗಳನ್ನು ರಚಿಸಿದ್ದಾರೆ.

ಐತಿಹ್ಯ
ಸುಮಾರು ಐದು ನೂರು ವರ್ಷಗಳ ಹಿಂದಿನ ಮಾತು. ವಿಜಯನಗರ ಸಾಮ್ರಾಜ್ಯದಲ್ಲಿದ್ದ ಬಂಕಾಪುರ ಪ್ರಾಂತದ ಮುಖ್ಯಪಟ್ಟಣದ ಹೆಸರು ಬಾಡ ಎಂದು. ವಿಜಯನಗರದಿಂದ ಗೋವಾಕ್ಕೆ ಹೋಗುವ ಹೆದ್ದಾರಿ. ಈ ಬಾಡದಿಂದಲೇ ಹಾಯ್ದು ಹೋಗುತ್ತಿತ್ತು. ಬಾಡ ಒಳ್ಳೇ ಆಯಕಟ್ಟಿನ ಸ್ಥಳ. ಈ ಬಂಕಾಪುರ ಪ್ರಾಂತಕ್ಕೆ ಡಣ್ಣಾಯಕ, ಬೀರಪ್ಪನಾಯಕ. (ಡಣ್ಣಾಯಕ ಎಂದರೆ ಆಯಕಟ್ಟಿನ ಸ್ಥಳದಲ್ಲಿ ಕಾದಿಟ್ಟ ಸೈನ್ಯದ ದಳಕ್ಕೆ ಸೇನಾಪತಿ ಎಂದು ನೇಮಿಸಲ್ಪಟ್ಟವನು) ಬೀರಪ್ಪನ ಹೆಂಡತಿ ಬಚ್ಚಮ್ಮ.

ಬೀರಪ್ಪನಾಯಕನಿಗೆ ತಿರುಪತಿ ತಿಮ್ಮಪ್ಪನಲ್ಲಿ ಬಹು ನಂಬಿಕೆ. ದಕ್ಷಿಣದಲ್ಲಿ ಸುಮಾರು ಒಂಬೈನೂರು ವರ್ಷಗಳ ಹಿಂದೆ ಶ್ರೀರಾಮಾನುಜಾಚಾರ್ಯರೆಂಬ ದೊಡ್ಡ ಗುರುಗಳು ಪ್ರಸಿದ್ಧರಾಗಿದ್ದರು. ಅವರು ಸ್ಥಾಪಿಸಿದ ಪಂಥಕ್ಕೆ ಶ್ರೀವೈಷ್ಣವ ಮತವೆಂದು ಹೆಸರು. ಡಣ್ಣಾಯಕ ಬೀರಪ್ಪನಾಯಕ ಮತ್ತು ಆತನ ಮಡದಿ ಬಚ್ಚಮ್ಮ ಇವರು ಶ್ರೀ ವೈಷ್ಣವ ಮತಕ್ಕೆ ಶರಣು ಹೋಗಿದ್ದರು. ಅಂದಿನಿಂದ ಇವರು ಸಹ ತಿರುಪತಿ ವಂಕಟೇಶ್ವರ ಸ್ವಾಮಿಯನ್ನೇ ತಮ್ಮ ಆರಾಧ್ಯ ದೈವವನ್ನಾಗಿ ಮಾಡಿಕೊಂಡರು.

ಬೀರಪ್ಪ ನಾಯಕ ಮತ್ತು ಬಚ್ಚಮ್ಮರಿಗೆ ಅನೇಕ ದಿನಗಳಿಂದ ಒಂದು ಹಂಬಲವಿತ್ತು. ಅದೇನೆಂದರೆ, ತಮಗೆ ಒಬ್ಬ ಕುಲದೀಪಕನಾದ ಮಗ ಜನಿಸಬೇಕು ಎಂದು. “ವಂಶೋದ್ಧಾರಕನಾದ ಒಬ್ಬ ಮಗನನ್ನು ಕರುಣಿಸು” ಎಂದು ಈ ದಂಪತಿಗಳು ತಿರುಪತಿ ತಿಮ್ಮಪ್ಪನಿಗೆ ಹರಕೆ ಹೊತ್ತಿದ್ದರು. ಅವರ ಆಸೆ ಫಲಿಸಿತು. ಬೀರಪ್ಪ ನಾಯಕ ಮತ್ತು ಬಚ್ಚಮ್ಮರಿಗೆ ಒಬ್ಬ ಮಗ ಜನಿಸಿದ. ತಂದೆ ತಾಯಿಗಳಿಗೆ ಆನಂದವೋ ಆನಂದ. ತಿರುಪತಿ ತಿಮ್ಮಪ್ಪನ ಆಶೀರ್ವಾದ ಎಂದು ಅವರು ತಮ್ಮ ಮಗುವಿಗೆ “ತಿಮ್ಮಪ್ಪ” ಎಂದೇ ನಾಮಕರಣ ಮಾಡಿದರು. ತಿಮ್ಮಪ್ಪ ಜನಿಸಿದ ಕಾಲ ಇಂತದ್ದೇ ಎಂದು ತಿಳಿಯದು; ಹದಿನೈದನೇಯ ಶತಮಾನದ ಕೊನೆಯ ವರ್ಷಗಳಲ್ಲಿ ಹುಟ್ಟಿದರು ಎಂದು ಹೇಳಬಹುದು.

ತಿಮ್ಮಪ್ಪನಾಯಕ ಒಬ್ಬ ಸೇನಾಧಿಪತಿಯ ಮಗನಾಗಿ ಜನಿಸಿದನಷ್ಟೆ. ಬಾಲ್ಯದಲ್ಲಿಯೇ ಅಕ್ಷರಾಭ್ಯಾಸ, ಬಂಕಾಪುರದ ಶ್ರೀನಿವಾಸಾಚಾರ್ಯರ ಬಳಿ ವಿದ್ಯಾಭ್ಯಾಸವಾಗಿ, ವ್ಯಾಕರಣ, ತರ್ಕ, ಮೀಮಾಂಸೆ, ಸಾಹಿತ್ಯಗಳಲ್ಲಿ ಪಾರಂಗತನಾದನು. ಜೊತೆಗೆ ಕತ್ತಿವರಸೆ, ಕುದುರೆ ಸವಾರಿಯನ್ನೂ ಕಲಿತ. ಕೆಲವು ವರ್ಷಗಳಲ್ಲಿ ಬೀರಪ್ಪನಾಯಕ ಮತ್ತು ಬಚ್ಚಮ್ಮ ತೀರಿಕೊಂಡರು. ತಂದೆಯ ಬಳಿಕ ತಿಮ್ಮಪ್ಪ ನಾಯಕ ತನ್ನ ಕಿರಿವಯಸ್ಸಿನಲ್ಲಿಯೇ ಬಂಕಾಪುರ ಪ್ರಾಂತಕ್ಕೆ ಡಣ್ಣಾಯಕನಾದ.
ಕನಕ ದಾಸರು ತಮ್ಮನ್ನು ತಾವೇ ಸಾವಿನ ದೇವತೆಯಾದ ಯಮನೆಂದು ತಮ್ಮ ಕೃತಿಗಳಲ್ಲಿ ಉಲ್ಲೇಖಿಸಿದ್ದಾರೆ.

ಸಾಧನೆ

ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು. ಇವರ ಕೀರ್ತನೆಗಳ ಅಂಕಿತ ಕಾಗಿನೆಲೆಯ ಆದಿಕೇಶವರಾಯ ಎಂಬುದು

Digiqole Ad

ಈ ಸುದ್ದಿಗಳನ್ನೂ ಓದಿ