ಇಡೀ ದೇಶದಲ್ಲೇ ಅತ್ಯಂತ ಶುದ್ಧ ಗಾಳಿ ಇರೋದು ಎಲ್ಲಿ ಗೊತ್ತೇ
ಇಡೀ ದೇಶದಲ್ಲೇ ಅತ್ಯಂತ ಶುದ್ಧ ಗಾಳಿ ಇರೋದು ಎಲ್ಲಿ ಗೊತ್ತೇ
ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಕಾರ ಕೊಡಗು ಜಿಲ್ಲೆ ದೇಶದಲ್ಲಿ ಅತ್ಯಂತ ಶುದ್ಧ ಗಾಳಿ ಹೊಂದಿರುವ ಸ್ಥಳಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಗಿಟ್ಟಿಸಿಕೊಂಡಿದೆ. ಈ ಪಟ್ಟಿಯಲ್ಲಿ ಗದಗ ಜಿಲ್ಲೆ 8ನೇ ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ ಇದೇ ಸಮಯದಲ್ಲಿ ಮಡಿಕೇರಿ ಐದನೇ ಸ್ಥಾನದಲ್ಲಿತ್ತು. ಇದೀಗ ಕೊಡಗಿನ ಹಸಿರು ಪರಿಸರ, ಪರಿಶುದ್ಧ ಗಾಳಿ, ನೀರು ಪ್ರವಾಸಿಗರಿಗೆ ಅಚ್ಚುಮೆಚ್ಚಿನ ತಾಣವಾಗಿದೆ. ಇನ್ನು ಹೆಚ್ಚು ವಾಯು ಮಾಲಿನ್ಯದಿಂದ ಸಮಸ್ಯೆ ಎದುರಿಸುತ್ತಿರುವ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಎಕ್ಯೂಐ ಸೂಚ್ಯಂಕ ನಿನ್ನೆ 457 ದಾಟಿದೆ.