ಮಂಗಳೂರು: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ:
ಮಂಗಳೂರು: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ:
ಮಂಗಳೂರು: ಪತ್ರಕರ್ತ, ಬೆಳ್ತಂಗಡಿ ಸುದ್ದಿ ಪತ್ರಿಕೆಯ ಮುಖ್ಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಭುವನೇಂದ್ರ ಪುದುವೆಟ್ಟು(42) ಇಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆಯ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು, ಕೂಡಲೆ ಅವರನ್ನು ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿಯಿತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.