• 7 ಡಿಸೆಂಬರ್ 2024

ಬೆಳಂದೂರು ಗ್ರಾಮ ಪಂಚಾಯತ್ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಆಚರಣೆ

 ಬೆಳಂದೂರು ಗ್ರಾಮ ಪಂಚಾಯತ್ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಆಚರಣೆ
Digiqole Ad

ಬೆಳಂದೂರು ಗ್ರಾಮ ಪಂಚಾಯತ್ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಆಚರಣೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಬೆಳಂದೂರು ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯ ಅರಿವು ಕೇಂದ್ರ ಇದರ ವತಿಯಿಂದ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮ ಬೆಳಂದೂರು ಗ್ರಾಮ ಪಂಚಾಯತ್ ನಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ವಕೀಲರಾದ ಮಹೇಶ್.ಕೆ ಸವಣೂರು ರವರು ಮಕ್ಕಳ ಹಕ್ಕುಗಳ ಬಗ್ಗೆ, ರಕ್ಷಣೆಯ ಬಗ್ಗೆ , ಲೈಂಗಿಕ ದೌರ್ಜನ್ಯಗಳನ್ನು ತಡೆಗಟ್ಟುವ ಬಗ್ಗೆ ,ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ತಡೆಗಟ್ಟುವ ಬಗ್ಗೆ, ಸಾಮಾಜಿಕ ಜಾಲ ತಾಣಗಳ ತೊಂದರೆಗಳ ಬಗ್ಗೆ ಮಾಹಿತಿ ನೀಡಿ ಪಂಚಾಯತ್ ವ್ಯಾಪ್ತಿಯ ಮಕ್ಕಳು ಪಂಚಾಯತ್ ನಲ್ಲಿ ಇರುವ ಗ್ರಂಥಾಲಯಕ್ಕೆ ಭೇಟಿ ನೀಡಿ ಅಲ್ಲಿನ ಪುಸ್ತಕಗಳನ್ನು ಓದುವ ಮೂಲಕ ತಮ್ಮ ಜ್ಞಾನದ ಅರಿವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರುಸಭಾ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾರ್ವತಿ ಮರಕ್ಕಡ ವಹಿಸಿದ್ದರು.ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಅಬೀರ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ.ಕೆ , ಗ್ರಂಥಾಲಯ ಮೇಲ್ವಿಚಾರಕಿ ವಿಮಲ ಉಪಸ್ಥಿತರಿದ್ದರು.ಇದೆ ವೇಳೆ ಗ್ರಂಥಾಲಯ ಸಪ್ತಾಹದ ಅಂಗವಾಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಮಕ್ಕಳಿಗೆ ಏರ್ಪಡಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.ಬಹುಮಾನ ವಿಜೇತರ ಪಟ್ಟಿಯನ್ನು ಪಂಚಾಯತ್ ಲೆಕ್ಕ ಸಹಾಯಕಿ ಸುನಂದ ವಾಚಿಸಿದರು.

ಗ್ರಂಥಾಲಯ ಮೇಲ್ವಿಚಾರಕಿ ವಿಮಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಪಂಚಾಯತ್ ಉಪಾಧ್ಯಕ್ಷರಾದ ಜಯಂತ ಅಬೀರ ವಂದಿಸಿದರು.ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಉಮೇಶ್ವರಿ ಅಗಳಿ,ವಿಠಲ ಅಗಳಿ,ತೇಜಾಕ್ಷಿ ಕೊಡಂಗೆ, ಗೌರಿ ಮಾದೋಡಿ, ಲೆಕ್ಕ ಸಹಾಯಕಿ ಸುನಂದ ಸಿಬ್ಬಂದಿ ವರ್ಗದವರಾದ ಪ್ರಶಾಂತಿ, ಗೀತಾ, ಸಂತೋಷ್, ಪಂಚಾಯತ್ ವ್ಯಾಪ್ತಿಯ ವಿವಿಧ ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Digiqole Ad

ಈ ಸುದ್ದಿಗಳನ್ನೂ ಓದಿ