• 9 ಡಿಸೆಂಬರ್ 2024

ಇನ್ಮುಂದೆ ರೈಲು ನಿಲ್ದಾಣದಲ್ಲಿ ಟಿಕೆಟ್ ಪಡೆಯಲು ಕ್ಯೂ ನಿಲ್ಲಬೇಕಾಗಿಲ್ಲ!

 ಇನ್ಮುಂದೆ ರೈಲು ನಿಲ್ದಾಣದಲ್ಲಿ ಟಿಕೆಟ್ ಪಡೆಯಲು ಕ್ಯೂ ನಿಲ್ಲಬೇಕಾಗಿಲ್ಲ!
Digiqole Ad

ಇನ್ಮುಂದೆ ರೈಲು ನಿಲ್ದಾಣದಲ್ಲಿ ಟಿಕೆಟ್ ಪಡೆಯಲು ಕ್ಯೂ ನಿಲ್ಲಬೇಕಾಗಿಲ್ಲ!

ಬೆಂಗಳೂರು: ಪ್ರಯಾಣಿಕರ ಸಂಕಷ್ಟ ತಪ್ಪಿಸಲು ನೈರುತ್ಯ ರೈಲ್ವೆಯು ನವ ಯೋಜನೆಯೊಂದನ್ನು ಜಾರಿಗೆ ತಂದಿದೆ.
ಇನ್ನು ಮುಂದೆ ರೈಲು ಪ್ರಯಾಣಿಕರು ಟಿಕೆಟ್ ಗಾಗಿ ಕೌಂಟರ್ ಮುಂದೆ ಸರದಿಯಲ್ಲಿ ನಿಂತು ಕಾಯಬೇಕಾಗಿಲ್ಲ. ಇದೀಗ ನೈರುತ್ಯ ರೈಲ್ವೆ ಎಂ-ಯುಟಿಎಸ್(ಮಲ್ಟಿಪಲ್ ಯೂನಿಟ್ ಟ್ರೈನ್ ಸಿಸ್ಟಮ್ )ವ್ಯವಸ್ಥೆ ಪರಿಚಯಿಸಿದೆ.
ಸರ್. ಎಂ. ವಿಶ್ವೇಶರಯ್ಯ ರೈಲು ನಿಲ್ದಾಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ,ಯಶವಂತಪುರ ರೈಲು ನಿಲ್ದಾಣಗಳಲ್ಲಿ ಪ್ರಾಯೋಗಿಕವಾಗಿ ಹೊಸ ವ್ಯವಸ್ಥೆ ಜಾರಿಗೆ ಬಂದಿದೆ.
ಎಂ-ಯುಟಿಎಸ್ ಯಂತ್ರಗಳ ಮೂಲಕ ಕಾಯ್ದಿರಿಸದ ಟಿಕೆಟ್, ಪ್ಲಾಟ್ ಫಾರ್ಮ್ ಟಿಕೆಟ್ ಗಳನ್ನು ಪ್ರಯಾಣಿಕರು ನಿಂತಿರುವ ಜಾಗಕ್ಕೆ ಸಿಬ್ಬಂದಿ ಹೋಗಿ ಕೊಡಲಿದ್ದಾರೆ. ನಿಲ್ದಾಣದಿಂದ 500 ಮೀಟರ್ ಅಂತರದಲ್ಲಿ ಎಂ- ಯುಟಿಎಸ್ ಟಿಕೆಟ್ ವಿತರಿಸಲು ಅವಕಾಶವಿದೆ ಎಂದು ನೈರುತ್ಯ ರೈಲ್ವೆ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರಾದ ತ್ರಿನೇತ್ರ ಕೆಆರ್ ತಿಳಿಸಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ