• 9 ಡಿಸೆಂಬರ್ 2024

ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ

 ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Digiqole Ad

ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಕಡಬ: ತಾಲೂಕಿನ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಕಾಪಿನ ಬಾಗಿಲು ಎಂಬಲ್ಲಿ ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣಕ್ಕೆ ಸಂಬಂಧಿಸಿ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ನ.20ರ ಬುಧವಾರ ಕಡಬ ತಹಶೀಲ್ದಾರ್ ಕಚೇರಿಯ ಮುಂದೆ ಪ್ರತಿಭಟನೆ ಆರಂಭಗೊಂಡಿದೆ.
ಸಾಮಾಜಿಕ ಹೋರಾಟಗಾರ, ನೀತಿ ತಂಡದ ರಾಜ್ಯಾಧ್ಯಕ್ಷ ಜಯಂತ್ ಟಿ., ನ್ಯಾಯವಾದಿ ಬಿ.ಎಂ.ಭಟ್, ಕೆ.ಆರ್.ಎಸ್. ಪಕ್ಷದ ವೇಣುಗೋಪಾಲ್ ಅವರು ನೇತೃತ್ವ ವಹಿಸಿದ್ದು, ತಹಶೀಲ್ದಾರ್ ಕಚೇರಿ ಪಕ್ಕದ ರಸ್ತೆ ಬದಿ ಅಧಿಕ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ವೃದ್ದ ದಂಪತಿ ನಜ್ಜುಗುಜ್ಜುಗೊಂಡ ಪಾತ್ರೆ ಪರಿಕರಗಳ ಜೊತೆ ಆಗಮಿಸಿ ಉರಿ ಬಿಸಿಲಿನಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಸಮಾನ ಮನಸ್ಕರು ಪ್ರತಿಭಟನೆಗೆ ಕೈ ಜೋಡಿಸಿದ್ದಾರೆ.
ಮನೆ ಕಳೆದುಕೊಂಡ ವೃದ್ದ ದಂಪತಿ ನನಗೆ ಜೀವ ಬೇಡ ಎಂದು ನೆಲದಲ್ಲಿ ಒದ್ದಾಡಿದ್ದು, ಅಧಿಕಾರಿಗಳು ಮೂಕಪ್ರೇಕ್ಷಕರಾಗಿ ನೋಡುತ್ತಿರುವುದು ಕಂಡು ಬಂತು.

Digiqole Ad

ಈ ಸುದ್ದಿಗಳನ್ನೂ ಓದಿ