ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟ.
ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಾರ್ಷಿಕ ಕ್ರೀಡಾಕೂಟ
ಕಾಣಿಯೂರು : ವಿದ್ಯಾರ್ಥಿಗಳು ಪಠ್ಯ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು . ಕ್ರೀಡೆ ನಮ್ಮ ಶಾರೀರಿಕ , ಮಾನಸಿಕ ಬೆಳವಣಿಗೆಯನ್ನು ಉತ್ತಮಪಡಿಸಲು ಮತ್ತು ಶಿಸ್ತುಬದ್ಧ ಜೀವನ ಕ್ರಮಕ್ಕೆ ದಾರಿದೀಪವಾಗುತ್ತದೆ ಎಂದು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸುತ್ತಾ ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿಯ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀಮತಿ ರತ್ನಾವತಿ ಎಸ್ ಡಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು . ಇನ್ನೋರ್ವ ಮುಖ್ಯ ಅತಿಥಿ ನಿವೃತ್ತ ಭೂಸೇನೆಯ ಕಮಿಷನರ್ ಶ್ರೀ ಗಿರೀಶ್ ಆರ್ನೂಜಿ ಕ್ರೀಡಾ ಧ್ವಜಾರೋಹಣಗೈದು ಮಾತನಾಡುತ್ತಾ ವಿದ್ಯಾರ್ಥಿಗಳ ಶಿಸ್ತು ಬದ್ಧ ಪಥಸಂಚಲಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ತನ್ನ ಬಾಲ್ಯದ ಶಾಲಾ ದಿನದ ನೆನಪುಗಳು ಮತ್ತು ಭೂಸೇನೆಯಲ್ಲಿನ ಅನುಭವಗಳನ್ನು ವಿದ್ಯಾರ್ಥಿಗಳಲ್ಲಿ ಹಂಚಿಕೊಳ್ಳುತ್ತಾ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ಮಾತನಾಡುತ್ತಾ ಉತ್ತಮ ಆಹಾರ ಮತ್ತು ಕ್ರೀಡೆ ನಮ್ಮ ಜೀವನಕ್ಕೆ ಅಮೂಲ್ಯವಾದದು. ಮಕ್ಕಳು ಚೈತನ್ಯದ ಚಿಲುಮೆಯಾಗಬೇಕು ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು .ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ದಿವೀಶ್ ಮುರುಳ್ಯ ಮಾತನಾಡುತ್ತಾ ವಿದ್ಯಾರ್ಥಿಗಳು ಎಲ್ಲಾ ಕ್ರೀಡೆಗಳಲ್ಲಿಯೂ ಧೈರ್ಯದಿಂದ ಭಾಗವಹಿಸುತ್ತಾ ವೀರರಾಗಿ ,ಯೋಧರಾಗಿ, ನಿಸ್ವಾರ್ಥರಾಗಿ ಸಮಾಜದಲ್ಲಿನ ಸವಾಲುಗಳನ್ನು ಎದುರಿಸಬೇಕು ಎಂದು ಹೇಳಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಚಂದ್ರಹಾಸ ರೈ ಅಗಲ್ಪಾಡಿ, ಶಾಲಾ ಟ್ರಸ್ಟಿಗಳಾದ ದೇವಿಕಿರಣ್ ರೈ ಮಾದೋಡಿ, ಹರಿಚರಣ್ ರೈ ಮಾದೋಡಿ, ಪೋಷಕ ಬಂಧು ಧನಂಜಯ ಕೇನಾಜೆ ,ಶಾಲಾ ಸಹ ಆಡಳಿತ ಅಧಿಕಾರಿ ಹೇಮನಾಗೇಶ್ ರೈ , ಹಿರಿಯ ಶಿಕ್ಷಕಿ ಸವಿತಾ ಕೆ ಉಪಸ್ಥಿತರಿದ್ದರು. ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ ಪ್ರಾಸ್ತಾವಿಕದೊಂದಿಗೆ ಸರ್ವರನ್ನು ಸ್ವಾಗತಿಸಿದರು. ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ ಭಟ್ ಹೂಗುಚ್ಚದೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಕನ್ನಡ ಮಾಧ್ಯಮದ ಮುಖ್ಯಗುರು ವಿನಯ ವಿ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ವಿದ್ಯಾರ್ಥಿನಿಯರಾದ ರಾಶಿ ಕೆ ಸಿ, ಅನುಶ್ರೀ ಎ ಎಂ, ಶರಣ್ಯ ಪ್ರಾರ್ಥಿಸಿದರು. ಸಹ ಮುಖ್ಯಸ್ಠೆ ಅನಿತಾ ಜೆ ರೈ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾಕೂಟದ ವಿಜೇತರನ್ನು ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ನಾಗೇಶ್ ರೈ ಮಾಳ, ಪೋಷಕಬಂಧು ಗಿರಿಶಂಕರ ಸುಲಾಯ ಶಾಲಾ ಸಿಬ್ಬಂದಿ ವರ್ಗದವರು ಅಭಿನಂದಿಸಿದರು ದೈಹಿಕ ಶಿಕ್ಷಣ ಶಿಕ್ಷಕರಾದ ಜಯಚಂದ್ರ ಮತ್ತು ವನಿತಾ ಕ್ರೀಡಾಕೂಟವನ್ನು ಯಶಸ್ವಿಯಾಗಿ ಸಂಘಟಿಸಿದರು, ಕ್ರೀಡಾ ಕಾರ್ಯದರ್ಶಿ ದಕ್ಷ ಎಂ ಡಿ (9) ಕ್ರೀಡಾಕೂಟದ ಪ್ರತಿಜ್ಞಾವಿಧಿ ಬೋಧಿಸಿದರು. ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಸಹಕರಿಸಿದರು.