ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ:
ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ:
ಮೂಡಬಿದಿರೆ: ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಬಿಬಿಎಂ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಮೃತ ವಿದ್ಯಾರ್ಥಿಯನ್ನು ಬೆಂಗಳೂರು ಮೂಲದ ಶಶಾಂಕ್ ಎಂದು ಗುರುತಿಸಲಾಗಿದೆ.
ಶಶಾಂಕ್ ನಿನ್ನೆ ಹಾಸ್ಟೆಲಿನಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಪ್ರತಿಭಾನ್ವಿತ ವಿದ್ಯಾರ್ಥಿಯಾಗಿ, ಕಲಿಕೆಯಲ್ಲಿ ಟಾಪರ್ ಆಗಿದ್ದರು. ಈ ರೀತಿ ತನ್ನ ಬದುಕು ಕೊನೆಗೊಳಿಸಿರುವುದು ಸಹಪಾಠಿಗಳು ಮತ್ತು ಉಪನ್ಯಾಸಕರಿಗೆ ಶಾಕ್ ತಂದಿದೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ಗೊತ್ತಾಗಬೇಕಿದೆ.