• 7 ಡಿಸೆಂಬರ್ 2024

ಪುತ್ತೂರು , ಕಡಬ ಮತ್ತು ಸುಳ್ಯ ತಾಲೂಕಿನ ಮೇಲ್ವಿಚಾರಕರಿಗೆ ಡಿಜಿಟಲ್ ಸಾಕ್ಷರತೆ , ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ

 ಪುತ್ತೂರು , ಕಡಬ ಮತ್ತು ಸುಳ್ಯ ತಾಲೂಕಿನ ಮೇಲ್ವಿಚಾರಕರಿಗೆ ಡಿಜಿಟಲ್ ಸಾಕ್ಷರತೆ , ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ
Digiqole Ad

ಪುತ್ತೂರು , ಕಡಬ ಮತ್ತು ಸುಳ್ಯ ತಾಲೂಕಿನ ಮೇಲ್ವಿಚಾರಕರಿಗೆ ಡಿಜಿಟಲ್ ಸಾಕ್ಷರತೆ , ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಯ ತರಬೇತಿ

ಶಿಕ್ಷಣ ಪೌಂಡೇಶನ್ ಸಂಸ್ಥೆಯ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರಿಗೆ ಒಂದು ದಿನದ ಡಿಜಿಟಲ್ ಸಾಕ್ಷರತೆ ಹಾಗೂ ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಗಳನ್ನೊಳಗೊಂಡ ತರಬೇತಿಯನ್ನು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಭಾರತಮಾತೆಯ ಹಾಗೂ ಗ್ರಂಥಾಲಯ ಪಿತಾಮಹ ಎಸ್ ಆರ್ ರಂಗನಾಥನ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯಾಗಿರುವ ನವೀನ್ ಭಂಡಾರಿರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಸ್ತುತ ದಿನಗಳಲ್ಲಿ ಡಿಜಿಟಲ್ ಸಾಕ್ಷರತೆಯ ಅಗತ್ಯತೆಯ ಬಗ್ಗೆ ಹಾಗೂ ಈ ತರಬೇತಿಯಿಂದಾಗುವ ಸಕಾರತ್ಮಕ ಪರಿಣಾಮಗಳ ಬಗ್ಗೆ ತಿಳಿಸಿಸಿದರು. ಶಿಕ್ಷಣ ಪೌಂಡೇಶನ್ ವತಿಯಿಂದ ಗ್ರಾಮ ಪಂಚಾಯತ್ ಅರಿವು ಕೇಂದ್ರಗಳಿಗೆ ಅನೇಕ ರೀತಿಯ ಡಿಜಿಟಲ್ ಸಾಧನಗಳನ್ನು ಒದಗಿಸಿದ್ದು, ಅವುಗಳ ಸಹಾಯದಿಂದ ಗ್ರಾಮೀಣ ಭಾಗದ ಸಮುದಾಯದ ಜನರು ಡಿಜಿಟಲ್ ಸಾಕ್ಷರರಾಗಬೇಕು, ಇದರ ಮೂಲಕ ತಮ್ಮ ದೈನಂದಿನ ಉದ್ಯೋಗ, ವ್ಯವಹಾರಗಳಲ್ಲಿ, ಸದೃಢರಾಗಬೇಕು ಎಂಬ ಕಿವಿಮಾತು ತಿಳಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ಬೆಟ್ಟಂಪಾಡಿ ಅರಿವು ಕೇಂದ್ರ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮಲತಾ ರವರು ನಿರ್ವಹಿಸಿದರು. ಬಲ್ನಾಡು ಗ್ರಾಮ ಪಂಚಾಯತ್ ಅರಿವು ಕೇಂದ್ರ ಮೇಲ್ವಿಚಾರಕರಾದ ಶ್ರೀಮತಿ ಸುಜಾತ ಇವರು ಸ್ವಾಗತಿಸಿದರು.
ಶಿಕ್ಷಣ ಫೌಂಡೇಶನ್ ಉಡುಪಿ ಜಿಲ್ಲಾ ಸಂಯೋಜಕರಾದ ರೀನಾ ಹೆಗಡೆಯವರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಯೋಜಕರಾದ ಶ್ರೀಮತಿ ಸುಮತಿ ರವರು ಡಿಜಿಟಲ್ ಸಾಕ್ಷರತೆ ಮತ್ತು ನಾಯಕತ್ವ ತರಬೇತಿಯನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಪುತ್ತೂರು ತಾಲೂಕು ಪಂಚಾಯತ್ ಗ್ರಂಥಾಲಯ ವಿಷಯ ನಿರ್ವಾಹಕರಾದ ಶೇಖ್ ಖಲಂದರ್ ಅಲಿ ರವರು, ಶಿಕ್ಷಣ ಫೌಂಡೇಶನ್ ಜಿಲ್ಲಾ ವ್ಯವಸ್ಥಾಪಕರಾದ ಲವೀಶ್ ಕುಮಾರ್, ತಾಲ್ಲೂಕು ಸಂಯೋಜಕರಾದ ದಾಕ್ಷಾಹಿಣಿ ರವರು ಉಪಸ್ಥಿತರಿದ್ದರು.
64 ಅರಿವು ಕೇಂದ್ರಗಳ ಮೇಲ್ವಿಚಾರಕರು ಈ ತರಬೇತಿಯ ಸದುಪಯೋಗ ಪಡೆದುಕೊಂಡರು.
ಸವಣೂರು ಗ್ರಾಮ ಪಂಚಾಯಿತಿ ಅರಿವು ಕೇಂದ್ರ ಮೇಲ್ವಿಚಾರಕರಾದ ಶ್ರೀಮತಿ ಶಾರಧ ಇವರು ಧನ್ಯವಾದ ತಿಳಿಸಿದರು.

Digiqole Ad

ಈ ಸುದ್ದಿಗಳನ್ನೂ ಓದಿ