ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ಪೋಷಕರ ಕ್ರೀಡಾಕೂಟ
ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ಪೋಷಕರ ಕ್ರೀಡಾಕೂಟ
ಕಾಣಿಯೂರು: ಪ್ರಗತಿ ವಿದ್ಯಾ ಸಂಸ್ಥೆಯು ವಿವಿಧ ಕ್ಷೇತ್ರಗಳಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳುವ ಮೂಲಕ ಸಾಧನೆಯನ್ನು ಮಾಡುತ್ತಿದೆ. ಮಕ್ಕಳೊಂದಿಗೆ ಪೋಷಕರ ಪ್ರತಿಭೆಯು ಕೂಡ ಅನಾವರಣಗೊಳ್ಳಬೇಕು ಎಂಬ ಉದ್ದೇಶದಿಂದ ಸಂಸ್ಥೆಯು ಪ್ರತಿವರ್ಷ ಪೋಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸುತ್ತಿದೆ. ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ನಾವು ಮಕ್ಕಳಿಗೆ ಪ್ರೇರಣೆಯಾಗಬೇಕು ಎಂದು ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ದಿವೀಶ್ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸುತ್ತಾ ಮಾತನಾಡಿದರು . ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು ಮಾತನಾಡುತ್ತಾ ಪೋಷಕರು ಸಂಸ್ಥೆಯೊಂದಿಗೆ ನಿಕಟ ಭಾಂದವ್ಯವನ್ನು ಇಟ್ಟುಕೊಳ್ಳುವ ಮೂಲಕ ಸಂಸ್ಥೆಯ ಸರ್ವಾಂಗೀಣ ಬೆಳವಣಿಗೆಗೆ ಸಹಕರಿಸಬೇಕು ಒಂದರಲ್ಲದೆ ಪೋಷಕರ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು .
ವೇದಿಕೆಯಲ್ಲಿ ಸಂಸ್ಥೆಯ ಟ್ರಸ್ಟಿ ದೇವಿಕಿರಣ್ ರೈ ಮಾದೋಡಿ, ಸಹ ಆಡಳಿತ ಅಧಿಕಾರಿ ಹೇಮಾ ನಾಗೇಶ್ ರೈ , ಕನ್ನಡ ಮಾಧ್ಯಮದ ಮುಖ್ಯಗುರು ವಿನಯ ವಿ ಶೆಟ್ಟಿ, ಹಿರಿಯ ಶಿಕ್ಷಕಿ ಸವಿತಾ ಕೆ ಉಪಸ್ಥಿತರಿದ್ದರು. ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ ಪ್ರಾಸ್ತಾವಿಕ ಮಾತಿನೊಂದಿಗೆ ಎಲ್ಲರನ್ನು ಸ್ವಾಗತಿಸಿದರು. ಪೋಷಕ ಬಂಧು ಜನಾರ್ದನ ಆಚಾರ್ಯ ಪ್ರಾರ್ಥಿಸಿದರು. ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ ಭಟ್ ಧನ್ಯವಾದ ಸಮರ್ಪಿಸಿದರು. ಶಿಕ್ಷಕಿಯರಾದ ಶ್ರುತಿ, ಸುಚೇತ, ಕಾರ್ಯಕ್ರಮ ನಿರೂಪಿಸಿದರೆ, ಪವಿತ್ರ , ರಚನಾ ವನಿತಾ, ರೇವತಿ, ಪ್ರತಿಭಾ , ಜಯಚಂದ್ರ ಸರ್ ಕಾರ್ಯಕ್ರಮ ಸಂಘಟಿಸಿದರು. ಶಿಕ್ಷಕ ಶಿಕ್ಷಕೇತರ ವೃಂದದವರು ಸಹಕರಿಸಿದರು.