• 9 ಡಿಸೆಂಬರ್ 2024

ಯೋಗಾಸನದಲ್ಲಿ ಅಕ್ಷಯ ಬಾಬ್ಲುಬೆಟ್ಟು ಚಿನ್ನದ ಪದಕದೊಂದಿಗೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

 ಯೋಗಾಸನದಲ್ಲಿ ಅಕ್ಷಯ ಬಾಬ್ಲುಬೆಟ್ಟು ಚಿನ್ನದ ಪದಕದೊಂದಿಗೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
Digiqole Ad

ಯೋಗಾಸನದಲ್ಲಿ ಅಕ್ಷಯ ಬಾಬ್ಲುಬೆಟ್ಟು ಚಿನ್ನದ ಪದಕದೊಂದಿಗೆ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಕರ್ನಾಟಕ ರತ್ನ ಡಾ|| ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ,ಅವಿನಾಶ್ ಯೋಗ ಮತ್ತು ಅರೋಬಿಕ್ಸ್ ಸಂಸ್ಥೆ ಮತ್ತು ಆಚಾರ್ಯ ಯೋಗ ಯೂತ್ ಕ್ಲಬ್ (ರಿ.) ಇವರ ಜಂಟಿ ಆಶ್ರಯ ದಲ್ಲಿ 03ನೇ ರಾಷ್ಟ್ರೀಯ ಯೋಗಾಸನ ಸ್ಪರ್ಧೆಯನ್ನು ಬೆಂಗಳೂರಿನ ರಾಜಾಜಿನಗರ ದಲ್ಲಿ 24 ನವಂಬರ್ 2024 ಆದಿತ್ಯವಾರ ದಂದು ಆಯೋಜಿಸಲಾಗಿತ್ತು. 10 ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಅಕ್ಷಯ ಬಾಬ್ಲುಬೆಟ್ಟು
ಪ್ರಥಮ ಸ್ಥಾನ ಗಳಿಸಿ ಫೆಬ್ರವರಿ ಯಲ್ಲಿ ದುಬೈ ನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಇವರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಏನೇಕಲ್ಲು ನಲ್ಲಿ 04 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ಇವರು ಏನೇಕಲ್ಲು (ಬಾಬ್ಲುಬೆಟ್ಟು) ನಿವಾಸಿ ಶ್ರೀ ಮೋಹನ್ ಕುಮಾರ್ ಮತ್ತು ಶ್ರೀಮತಿ ದಿವ್ಯ ಕುಮಾರಿ ರವರ ಪುತ್ರಿ.ನಿರಂತರ ಯೋಗ ಕೇಂದ್ರ ಏನೇಕಲ್ಲು ಇಲ್ಲಿಯ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ