ಪೆರುವಾಜೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಸ್ತೆ ಸುರಕ್ಷತೆ ಮತ್ತು ಡ್ರಗ್ಸ್ ಜಾಗೃತಿ ಕಾರ್ಯಕ್ರಮ
ಪೆರುವಾಜೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಸ್ತೆ ಸುರಕ್ಷತೆ ಮತ್ತು ಡ್ರಗ್ಸ್ ಜಾಗೃತಿ ಕಾರ್ಯಕ್ರಮ
ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಮತ್ತು ಡಾಕ್ಟರ್ ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಎನ್ಎಸ್ಎಸ್ ಘಟಕ ಇದರ ಸಹಭಾಗಿತ್ವದಲ್ಲಿ ಡಾಕ್ಟರ್ ಕೆ ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಸ್ತೆ ಸುರಕ್ಷತೆ ಮತ್ತು ಡ್ರಗ್ಸ್ ಜಾಗೃತಿ ಕಾರ್ಯಕ್ರಮ ನೆರವೇರಿತು. ಲಯನ್ಸ್ ಅಧ್ಯಕ್ಷ ಉಷಾ. ಬಿ ಭಟ್ ಅಧ್ಯಕ್ಷತೆ ವಹಿಸಿದ್ದರು ಸಂಪನ್ಮೂಲ ವ್ಯಕ್ತಿ ಶ್ರೀ ಈರಯ್ಯ ದೊಂತೂರ್ ಪಿಎಸ್ಐ ಬೆಳ್ಳಾರೆ ಪೊಲೀಸ್ ಠಾಣೆ ಇವರು ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಯಾಗಿ ಶ್ರೀ ಬಾಲಸುಬ್ರಮಣ್ಯ ಪಿಎಸ್ ಪ್ರಾಂಶುಪಾಲರು ಉಪಸ್ಥಿತರಿದ್ದರು. ಶ್ರೀ ಗಿರೀಶ್ ಸಹಾಯಕ ಅಧ್ಯಾಪಕರು ಎನ್ ಎಸ್ ಎಸ್ ಘಟಕ ಇವರು ಪ್ರಾಸ್ತಾವಿಕ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಲಯನ್ ಐಪಿಪಿ ವಿಟ್ಟಲ್ ಶೆಟ್ಟಿ ,ಲಯನ್ ಚಂದ್ರಹಾಸ ರೈ ,ಲಯನ್ ಗಣೇಶ್ ರೈ ಮತ್ತು ಲಯನ್ ರಕ್ಷಿತ್ ಪೆರುವಾಜೆ ಭಾಗವಹಿಸಿದ್ದರು.