ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರಿಗೆ 2 ದಿನ ಮುಟ್ಟಿನ ರಜೆ ಘೋಷಿಸಿದ ಕೇರಳ ಸರಕಾರ:
ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರಿಗೆ 2 ದಿನ ಮುಟ್ಟಿನ ರಜೆ ಘೋಷಿಸಿದ ಕೇರಳ ಸರಕಾರ:
ತಿರುವನಂತಪುರಂ: ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು 2 ದಿನ ಮುಟ್ಟಿನ ರಜೆ ನೀಡುವ ಮಹತ್ವದ ನಿರ್ಧಾರವನ್ನು ಕೇರಳ ಸರಕಾರ ಘೋಷಿಸಿದೆ.
ರಾಜ್ಯ ಶಿಕ್ಷಣ ಸಚಿವ ವಿ ಶಿವನ್ ಕುಟ್ಟಿ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಇಂದಿನ ಯುಗದಲ್ಲಿ ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಈ ಅಂಶಗಳನ್ನು ಪರಿಗಣಿಸಿ ಐಟಿಐ ಪ್ರವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು ಎರಡು ದಿನಗಳ ಋತುಚಕ್ರದ ರಜೆಯನ್ನು ನೀಡಲು ಸರಕಾರ ನಿರ್ಧರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.