ಸುಳ್ಯ: ಮರದಿಂದ ಬಿದ್ದು ವ್ಯಕ್ತಿ ಸಾವು:
ಸುಳ್ಯ: ಮರದಿಂದ ಬಿದ್ದು ವ್ಯಕ್ತಿ ಸಾವು:
ಸುಳ್ಯ: ಎಲಿಮಲೆಯ ಮಾವಿನಕಟ್ಟೆ ಸಮೀಪ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೊಡಗಿನ ಸಿದ್ದಾಪುರ ಮೂಲದ ಕೃಷ್ಣ(55) ಎಂದು ಗುರುತಿಸಲಾಗಿದೆ. ಸಂಬಂಧಿಕರ ಮನೆಗೆ ಕೆಲಸಕ್ಕೆಂದು ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡಿದ್ದ ಕೃಷ್ಣ ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಆಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.