• 6 ಡಿಸೆಂಬರ್ 2024

ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರಿನಲ್ಲಿ ಹಿರಿಯ ವಿದ್ಯಾರ್ಥಿಗಳಿಗೆ ಶಟಲ್ ಬ್ಯಾಡ್ಮಿಂಟನ್ ಲೀಗ್ PBL 2k24

 ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರಿನಲ್ಲಿ ಹಿರಿಯ ವಿದ್ಯಾರ್ಥಿಗಳಿಗೆ ಶಟಲ್ ಬ್ಯಾಡ್ಮಿಂಟನ್ ಲೀಗ್ PBL 2k24
Digiqole Ad

ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರಿನಲ್ಲಿ ಹಿರಿಯ ವಿದ್ಯಾರ್ಥಿಗಳಿಗೆ ಶಟಲ್ ಬ್ಯಾಡ್ಮಿಂಟನ್ ಲೀಗ್ PBL 2k24

ಕಾಣಿಯೂರು:- ಪ್ರಗತಿ ವಿದ್ಯಾಸಂಸ್ಥೆಯ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನಡೆಸಲ್ಪಟ್ಟ ಕಾರ್ಯಕ್ರಮಗಳು ಅರ್ಥಪೂರ್ಣವಾಗಿದ್ದು ಸಂಸ್ಥೆಯ ಬೆಳವಣಿಗೆಗೆ ಪೂರಕವಾಗಿದೆ. ಈ ದಿನದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಯಶಸ್ವಿಯಾಗಿ ನಡೆಯಲಿ ಎಂದು ಪ್ರಗತಿ ವಿದ್ಯಾಸಂಸ್ಥೆ ಕಾಣಿಯೂರಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನಡೆದ ಹೊನಲು ಬೆಳಕಿನ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವವನ್ನು ಉದ್ಘಾಟಿಸಿದ ಪೂರ್ವ ವಲಯಾಧಿಕಾರಿ ಝೋನ್ 15, ಜೆಸಿ ಪ್ರದೀಪ್ ಕುಮಾರ್ ರೈ ಪನ್ನೇ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ದೀಕ್ಷಿತ್ ಬಂಡಾಜೆ ಇವರು ಮಾತನಾಡಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಹಿರಿಯ ವಿದ್ಯಾರ್ಥಿಗಳ ಸಹಕಾರವನ್ನು ಕೋರುತ್ತಾ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು.

ಶಾಲಾ ಸಂಚಾಲಕರಾದ ಶ್ರೀ ಜಯಸೂರ್ಯ ರೈ ಮಾದೋಡಿ ಮಾತನಾಡುತ್ತಾ ಹಿರಿಯ ವಿದ್ಯಾರ್ಥಿಗಳು ನಮ್ಮ ಬಲ. ಉನ್ನತ ಹುದ್ದೆಗೀರಿ, ಉತ್ತಮ ವ್ಯಕ್ತಿಗಳಾಗಿ ಬೆಳಗಿ ಬಾಳಬೇಕು. ಅವರ ಸಾಧನೆಗಳು ನಮಗೆ ಸಂತೋಷ ತರುವಂತದ್ದು ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿರಿಯ ವಿದ್ಯಾರ್ಥಿ ಸಂಘದ ಗೌರವ ಸಲಹೆಗಾರರಾದ ಶ್ರೀ ಗಿರಿಶಂಕರ ಸುಲಾಯ ಮಾತನಾಡುತ್ತಾ ಹಿರಿಯ ವಿದ್ಯಾರ್ಥಿಗಳು ಸಂಸ್ಥೆಯ ಆಸ್ತಿ, ಹಿರಿಯ ವಿದ್ಯಾರ್ಥಿಗಳು ನಿರಂತರವಾಗಿ ಸಂಸ್ಥೆಯ ಜೊತೆ ನಿಕಟ ಸಂಪರ್ಕದಲ್ಲಿದ್ದು ಸಂಸ್ಥೆಯ ಬೆಳವಣಿಗೆಗೆ ಕಾರಣೀಭೂತಾರಾಗಬೇಕು ಎಂದು ಹೇಳಿ ಪಂದ್ಯಾಟಕ್ಕೆ ಶುಭ ಹಾರೈಸಿದರು.

ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಉದಯ ರೈ ಮಾದೋಡಿ ಮಾತನಾಡುತ್ತಾ ಹಿರಿಯ ವಿದ್ಯಾರ್ಥಿಗಳು ಬಾಲ್ಯದ ದಿನಗಳನ್ನು ಮೆಲುಕು ಹಾಕುತ್ತಾ ಮತ್ತೆ ಈ ಕ್ರೀಡಾಂಗಣದಲ್ಲಿ ಆಡುವ ಅವಕಾಶ ಒದಗಿ ಬಂದಿದೆ ಎನ್ನುತ್ತಾ ಶುಭ ಹಾರೈಸಿದರು. ಪ್ರಗತಿ ಕನ್ನಡ ಮಾಧ್ಯಮದ ಮುಖ್ಯಗುರು ವಿನಯ ವಿ ಶೆಟ್ಟಿ ಮಾತನಾಡುತ್ತಾ
ಸಂಸ್ಥೆ ಮತ್ತು ಹಿರಿಯ ವಿದ್ಯಾರ್ಥಿಗಳಿಗೆ ಭಾವನಾತ್ಮಕ ಸಂಭಂದವಿದ್ದು ಅದು ನಿರಂತರವಾಗಿರಲಿ ಎನ್ನುತ್ತಾ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ವೇದಿಕೆಯಲ್ಲಿ ಶಾಲಾಡಳಿತ ಮಂಡಳಿಯ ಸದಸ್ಯರಾದ ನಾಗೇಶ್ ರೈ ಮಾಳ, ಟ್ರಸ್ಟಿಗಳಾದ ವೃಂದಾ ಜೆ ರೈ, ದೇವಿಕಿರಣ್ ರೈ ಮಾದೋಡಿ, ಹರಿಚರಣ್ ರೈ ಮಾದೋಡಿ, ಸಹ ಆಡಳಿತ ಅಧಿಕಾರಿ ಹೇಮಾ ನಾಗೇಶ್ ರೈ, ಆಂಗ್ಲ ಮಾಧ್ಯಮದ ಮುಖ್ಯಗುರು ನಾರಾಯಣ ಭಟ್ ಉಪಸ್ಥಿತರಿದ್ದರು. ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ ಧನ್ಯವಾದ ಸಮರ್ಪಿಸಿದರು. ಸಂಸ್ಥೆಯ ಶಿಕ್ಷಕಿ ರಚನಾ ಪ್ರಾರ್ಥಿಸಿದರು. ಹಿರಿಯ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಲಿಖಿತ್ ರೈ ಸವಣೂರು ಕಾರ್ಯಕ್ರಮ ನಿರ್ವಹಿಸಿದರು.

ಪಂದ್ಯಾಟದಲ್ಲಿ 8 ತಂಡಗಳಿದ್ದು ಮಾಲಕರಾಗಿ ಶ್ರೀ ನಾಗೇಶ್ ರೈ ಮಾಳ, ವಸಂತ ರೈ ಕಾರ್ಕಳ, ಶ್ರೀ ಸುಜಿತ್ ರೈ ಪಟ್ಟೆ, ಶ್ರೀ ಹರಿಪ್ರಸಾದ್ ರೈ ಶೇಣಿ, ಶ್ರೀ ಗಿರಿಶಂಕರ ಸುಲಾಯ ಶ್ರೀ ಧನಂಜಯ ಕೇನಾಜೆ, ಶ್ರೀ ಜೀತಾಕ್ಷ ಬರೆಪ್ಪಾಡಿ, ಶ್ರೀ ದೀಕ್ಷಿತ್ ಬಂಡಾಜೆ ಸಹಕರಿಸಿದರು.

Digiqole Ad

ಈ ಸುದ್ದಿಗಳನ್ನೂ ಓದಿ