ಫೆಂಗಲ್ ಚಂಡಮಾರುತ ಎಫೆಕ್ಟ್: ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿತ:
ಫೆಂಗಲ್ ಚಂಡಮಾರುತ ಎಫೆಕ್ಟ್: ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿತ:
ಮಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಮಂಗಳೂರಿನಲ್ಲಿ ಮಳೆಯ ಆರ್ಭಟ ಹೆಚ್ಚಾಗುತ್ತಿದ್ದು, ಅಪಾರ ಪ್ರಮಾಣದ ನೀರಿನಿಂದ ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ.
ಹೆದ್ದಾರಿ ಬದಿ ಗೇಲ್ ಗ್ಯಾಸ್ ಕಂಪೆನಿ ಅಗೆದಿದ್ದ ಹೊಂಡದಲ್ಲಿ ನೀರು ತುಂಬಿ ಕೂಳೂರು ಬಳಿ ಮಂಗಳೂರು- ಉಡುಪಿ ಸಂಪರ್ಕದ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ವಾಹನ ಸವಾರರು ಪರದಾಡುವ ಸ್ಥಿತಿ ಉಂಟಾಗಿದೆ.