ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ, ಸಾಧು ಸಂತರ ರಕ್ಷಣೆಗೆ ಆಗ್ರಹಿಸಿ ದ.ಕ ಜಿಲ್ಲಾ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಬುಧವಾರ ಬೆಳಗ್ಗೆ (ಡಿ4) ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಅಂಬೇಡ್ಕರ್ ವೃತ್ತದಿಂದ ಹಂಪನಕಟ್ಟೆಯ ಮಿನಿ ವಿಧಾನ ಸೌಧದ ವರೆಗೆ ಮೆರವಣಿಗೆಯ ಅನಂತರ ಪ್ರತಿಭಟನಾ ಸಭೆ ನಡೆಯಿತು.
ಕೆಲವು ಹಿಂದೂ ಕಾರ್ಯಕರ್ತರುಸ್ವಲ್ಪ ಹೊತ್ತು ರಸ್ತೆ ತಡೆ ನಡೆಸಿದರು, ಈ ವೇಳೆ ಪೊಲೀಸರೊಂದಿಗೆ ವಾಗ್ವಾದವೂ ನಡೆಯಿತು.