ಪೋಷಕತ್ವ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಟಾನಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ
ಪೋಷಕತ್ವ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಟಾನಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ
ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಜಿಲ್ಲೆಯಲ್ಲಿ ದತ್ತು ಕಾರ್ಯಕ್ರಮ ಮತ್ತು ಪೋಷಕತ್ವ ಕಾರ್ಯಕ್ರಮ ಕುರಿತು ಹಮ್ಮಿಕೊಳ್ಳಲಾಗಿದೆ. ಭಾರತ ಸರ್ಕಾರ, ಕೇಂದ್ರೀಯ ದತ್ತು ಸಂಪನ್ಮೂಲ ಪ್ರಾಧಿಕಾರ, ಕರ್ನಾಟಕ ಸರ್ಕಾರ ಮತ್ತು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು ಇವರ ವತಿಯಿಂದ ಮಿಷನ್ ವಾತ್ಸಲ್ಯ ಯೋಜನೆಯ ದತ್ತು ಕಾರ್ಯಕ್ರಮ ಮತ್ತು ಪೋಷಕತ್ವ ಯೋಜನೆಯ ಕುರಿತು ಕಾನೂನು ಬದ್ಧ ದತ್ತು ಮತ್ತು ಪೋಷಕತ್ವ ಯೋಜನೆಯ ಮೂಲಕ ದತ್ತು ಹೋಗುವಂತಹ ಮಗುವಿಗೆ ಶಾಶ್ವತ ಕುಟುಂಬದ ಅಗತ್ಯವಿರುವ ಮಕ್ಕಳಿಗೆ ಶಾಶ್ವತ, ಸ್ಥಿರ ಮತ್ತು ಕಾಳಜಿಯುಳ್ಳ ವಾತಾವರಣವನ್ನು ಅನುಕೂಲವಾಗುವಂತೆ ಪ್ರತಿ ವರ್ಷ ನವೆಂಬರ್ ಮಾಹೆಯಲ್ಲಿ ರಾಷ್ಟ್ರೀಯ ದತ್ತು ಮಾಸಾಚರಣೆಯನ್ನು ಆಚರಿಸಲಾಗುತ್ತಿದೆ. ಅದರಂತೆ ನವೆಂಬರ್-2024ನ್ನು “Fostercare and Fostercare leading to the Adoption’ ಎಂಬ ಈ ಬಾರಿಯ ಘೋಷವಾಕ್ಯವಾಗಿದೆ. ಜಿಲ್ಲೆಯಲ್ಲಿ ರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ದತ್ತು ಕಾರ್ಯಕ್ರಮ ಮತ್ತು ಪೋಷಕತ್ವ ಕಾರ್ಯಕ್ರಮದ ಕುರಿತು ಜಿಲ್ಲಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯಲ್ಲಿ ಪೋಷಕತ್ವ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿರುವುದಕ್ಕಾಗಿ ರಾಜ್ಯ ಮಟ್ಟದಲ್ಲಿ ಜರುಗಿದ ರಾಷ್ಟ್ರೀಯ ದತ್ತು ಮಾಸಾಚರಣೆಯ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ ಮತ್ತು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು ಇವರು ಪೋಷಕತ್ವದಲ್ಲಿ ಹೆಚ್ಚಿನ ಮಕ್ಕಳನ್ನು ನಿಯೋಜಿಸುವುದರೊಂದಿಗೆ ಪರ್ಯಯ ಪೋಷಣೆ ಮೂಲಕ ಮಕ್ಕಳ ಪುನರ್ವಸತಿಗೆ ಶ್ರಮಿಸಿರುವುದಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ದಕ್ಷಿಣ ಕನ್ನಡ ಜಿಲ್ಲೆಗೆ ನೀಡಿ ಗೌರವಿಸಿ ಅಭಿನಂದಿಸಿದ್ದಾರೆ ಎಂದು ಮಾನ್ಯ ಶ್ರೀ ಮುಲೈ ಮುಗಿಲನ್ ಎಂ.ಪಿ, ಜಿಲ್ಲಾಧಿಕಾರಿ ಮತ್ತು ಅಧ್ಯಕ್ಷರು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ದಕ್ಷಿಣ ಕನ್ನಡ ಜಿಲ್ಲೆ ಇವರು ತಿಳಿಸಿದ್ದಾರೆ.