ಜಾಲ್ಸೂರು: ಅರಣ್ಯ ಇಲಾಖೆ ಸಿಬ್ಬಂದಿ ಕುಸಿದು ಬಿದ್ದು ಸಾವು:
ಜಾಲ್ಸೂರು: ಅರಣ್ಯ ಇಲಾಖೆ ಸಿಬ್ಬಂದಿ ಕುಸಿದು ಬಿದ್ದು ಸಾವು:
ಸುಳ್ಯ: ಸುಳ್ಯದ ಜಾಲ್ಸೂರಿನಲ್ಲಿ ಕರ್ತವ್ಯ ನಿರತ ಫಾರೆಸ್ಟ್ ವಾಚರ್ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಇಂದು ನಡೆದಿದೆ.
ಜಾಲ್ಸೂರಿನ ಗೇಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಾಚರ್ ಸದಾಶಿವ(50) ಮೃತಪಟ್ಟ ವ್ಯಕ್ತಿ. ಕುಸಿದು ಬಿದ್ದ ಅವರನ್ನು ಕೂಡಲೇ ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋದರೂ ಅಲ್ಲಿಯೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.