ಮೂರು ತಿಂಗಳು ಜೋಗ ಜಲಪಾತ ಪ್ರವೇಶ ನಿಷೇಧ:
ಮೂರು ತಿಂಗಳು ಜೋಗ ಜಲಪಾತ ಪ್ರವೇಶ ನಿಷೇಧ:
ಶಿವಮೊಗ್ಗ: ಅಭಿವೃದ್ಧಿ ಕಾಮಗಾರಿ ಹಿನ್ನಲೆಯಲ್ಲಿ ಜೋಗ ಜಲಪಾತದ ವೀಕ್ಷಣೆಗೆ ಮೂರು ತಿಂಗಳುಗಳ ಕಾಲ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜನವರಿ 1 ರಿಂದ ಮಾರ್ಚ್ 15 ರವರೆಗೆ ಮೂರು ತಿಂಗಳುಗಳ ಕಾಲ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭಿವೃದ್ಧಿ ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.