ಕನ್ನಡ ಭವನ ರೂವಾರಿಗಳಾದ ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ದಂಪತಿಗೆ “ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ “
ಕನ್ನಡ ಭವನ ರೂವಾರಿಗಳಾದ ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ದಂಪತಿಗೆ “ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ “
ಕಾಸರಗೋಡು :ಪರ್ಯಾಯ ಶ್ರೀ ಪುತ್ತಿಗೆ ಮಠ, ಶ್ರೀ ಕೃಷ್ಣ ಮಠ ಉಡುಪಿ ಹಾಗೂ ಮಂಗಳೂರಿನ ಕಥಾಬಿಂದು ಪ್ರಕಾಶನ ಸಂಯುಕ್ತ ಆಶ್ರಯದಲ್ಲಿ ನಡೆದ “ಗೀತಾ ಗಾಯನೋತ್ಸವ “50ಕೃತಿಗಳ ಲೋಕಾರ್ಪಣೆ, ಸಾಹಿತ್ಯೋತ್ಸವ ಸಮಾರಂಭವನ್ನು ಪರಮಪೂಜ್ಯ ಶ್ರೀ ಶ್ರೀ ಸುಗುನೇಂದ್ರ ಶ್ರೀಪಾದರು ಹಾಗೂ ಶ್ರೀ ಶ್ರೀ ಸುಶೀo ದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿದರು. ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರ್ ಅಧ್ಯಕ್ಷತೆ ವಹಿಸಿದ್ದರು.
ಉಡುಪಿ ಶ್ರೀ ಕೃಷ್ಣ ಮಠದ ರಜಾo ಗಣ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಸರಗೋಡು ಕನ್ನಡ ಭವನ, ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಾಯದ ರೂವಾರಿಗಳಾದ ಇತ್ತೀಚಿಗೆ ಸಮಾಜ ಸೇವಾ ವಿಭಾಗದಲ್ಲಿ “ಗೌರವ ಡಾಕ್ಟರೇಟ್ “ಪ್ರಶಸ್ತಿ ಪುರಸ್ಕೃತರಾದ ಕೆ. ವಾಮನ್ ರಾವ್ ಬೇಕಲ್ ಹಾಗೂ ಪತ್ನಿ ಸಂಧ್ಯಾರಾಣಿ ಟೀಚರ್ ದಂಪತಿಗೆ ಪರಮಪೂಜ್ಯ ಶ್ರೀ ಶ್ರೀ ಸುಗುನೇಂದ್ರ ಶ್ರೀಪಾದರು ಉಡುಪಿ ಶ್ರೀ ಕೃಷ್ಣ ಮಠದ ಪ್ರತಿಷ್ಠಿತ ಪ್ರಶಸ್ತಿಯಾದ “ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ “ನೀಡಿ ಮಂತ್ರಾಕ್ಷತೆಯೊಂದಿಗೆ ಅನುಗ್ರಹಿಸಿ ಗೌರವಿಸಿದರು. ಕಥಾಬಿಂಧು ಪ್ರಕಾಶನದ ಅಧ್ಯಕ್ಷರಾದ ಪಿ. ವಿ. ಪ್ರದೀಪ್ ಕುಮಾರ್, ಸಂಚಾಲಕರಾದ ಡಾ. ಕೊಲಚಪ್ಪೆ ಗೋವಿಂದ ಭಟ್, ಯುಗಪುರುಷ ಭುವನಾಬಿರಾಮ, ಮುಂತಾದ ಗಣ್ಯರನೇಕರಿದ್ದರು.