ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ


ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು: ಕರ್ನಾಟಕ ರಾಜ್ಯದ 6 ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಹಾ ಸನ, ಚಾಮರಾಜನಗರ,ಕೊಡಗು, ಮೈಸೂರು,ಚಿಕ್ಕಮಗಳೂರು, ಉಡುಪಿ,ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆಗಳಿದ್ದು, ಜನವರಿ 20ರ ವರೆಗೂ ಇದೆ ಹವಾಮಾನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.