ಕಡಬದಲ್ಲಿ ಬೈಕ್ ಅಪಘಾತ, ಶಾಲಾ ವಿದ್ಯಾರ್ಥಿ ಮೃತ್ಯು


ಕಡಬದಲ್ಲಿ ಬೈಕ್ ಅಪಘಾತ, ಶಾಲಾ ವಿದ್ಯಾರ್ಥಿ ಮೃತ್ಯು
ಕಡಬ: ನಿಯಂತ್ರಣ ತಪ್ಪಿ ಬೈಕೊಂದು ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಇಂದು ಬೆಳಗ್ಗೆ ಧರ್ಮಸ್ಥಳ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪೇರಡ್ಕ ಸಮೀಪ ನಡೆದಿದೆ. ಮೃತಪಟ್ಟ ಬಾಲಕನನ್ನು ಪೇರಡ್ಕದ ಖಾಸಗಿ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ, ನೂಜಿಬಾಳ್ತಿಲ ಗ್ರಾಮದ ಹೊಸಮನೆ ಕಾನ ನಿವಾಸಿ ವಿಶ್ವನಾಥ್ ಎಂಬವರ ಪುತ್ರ ಆಶಿಶ್(16) ಎಂದು ಗುರುತಿಸಲಾಗಿದೆ.