ಏನೇಕಲ್ಲು: ಜ.19 ರಂದು ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ
ಏನೇಕಲ್ಲು: ಜ.19 ರಂದು ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ:
ಸುಬ್ರಹ್ಮಣ್ಮ : ಸುಬ್ರಹ್ಮಣ್ಯ ರೋಟರಿ ಕ್ಲಬ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ( ಅಂದತ್ವ ನಿವಾರಣ ವಿಭಾಗ ) ಮಂಗಳೂರು ಹಾಗೂ ಹಲವು ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಏನೇಕಲ್ಲಿನ ರೈತ ಯುವಕ ಮಂಡಲ ಸಭಾಂಗಣದಲ್ಲಿ ಜನವರಿ 19ರಂದು ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ನಡೆಯಲಿದೆ. ಇದರ ಪ್ರಯೋಜನವನ್ನು ಎಲ್ಲಾ ಸಾರ್ವಜನಿಕರು, ಸಂಘ ಸಂಸ್ಥೆಯವರು ಪಡೆದುಕೊಳ್ಳಬೇಕಾಗಿ ಸುಬ್ರಹ್ಮಣ್ಯ ರೋಟರಿ ಕ್ಲಬ್ ಅಧ್ಯಕ್ಷರಾದ ಚಂದ್ರಶೇಖರ್ ನಾಯರ್ ವಿನಂತಿಸಿಕೊಂಡಿದ್ದಾರೆ.