• 7 ಫೆಬ್ರವರಿ 2025

ಕುಂಬ್ರ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

 ಕುಂಬ್ರ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
Digiqole Ad

ಕುಂಬ್ರ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ 

ಪುತ್ತೂರು: ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬ್ರದ ಶೇಖಮಲೆಯಲ್ಲಿ ನಡೆದಿದೆ. ಶೇಖಮಲೆ ಚೆಕ್ಕನಡ್ಕ ದರ್ಖಾಸ್ ನಿವಾಸಿ ದೀಪಕ್ ಎಂಬವರ ಪತ್ನಿ ಲಲಿತ ರೈ (37) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಮೃತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಿದ್ದಾರೆ.

 ಮೃತರ ಪತಿ ದೀಪಕ್ ಅವರು ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Digiqole Ad

ಈ ಸುದ್ದಿಗಳನ್ನೂ ಓದಿ