ಮೇ.3 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ


ಮೇ.3 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3ರಂದು 53ನೇ ವರ್ಷದ ಉಚಿತ ಸಾಮೂಹಿಕ ವಿವಾಹವು ಸಂಜೆ 6.48ರ ಗೋಧೂಳಿ ಲಗ್ನದಲ್ಲಿ ನೆರವೇರಲಿದೆ. ಆಸಕ್ತರು 2025 ಏಪ್ರಿಲ್ 25ರೊಳಗೆ ಅರ್ಜಿ ಸಲ್ಲಿಸಬಹುದು. ಎರಡನೇ ವಿವಾಹಕ್ಕೆ ಅವಕಾಶವಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳ ಟ್ರಸ್ಟ್ ವತಿಯ ಮೂಲಕ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 08256-266644 ಸಂಖ್ಯೆಯನ್ನು ಸಂಪರ್ಕಿಸುವಂತೆ ಕ್ಷೇತ್ರದ ಪ್ರಕಟಣೆ ತಿಳಿಸಿದೆ.