ಸಿಇಟಿ ಪರೀಕ್ಷೆ ಪಠ್ಯಕ್ರಮ ಪ್ರಕಟಿಸಿದ ಕೆಇಎ
ಸಿಇಟಿ ಪರೀಕ್ಷೆ ಪಠ್ಯಕ್ರಮ ಪ್ರಕಟಿಸಿದ ಕೆಇಎ
ಬೆಂಗಳೂರು: 2025 ನೇ ಸಾಲಿನ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಕೆಇಎ ಪಠ್ಯಕ್ರಮವನ್ನು ತನ್ನ ವೆಬ್ಸೈಟ್ ನಲ್ಲಿ ಪ್ರಕಟಿಸಿದೆ. ಈ ಕುರಿತು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು, ಪ್ರಥಮ ವರ್ಷದ ಮತ್ತು ದ್ವಿತೀಯ ವರ್ಷದ ಪಿಯುಸಿಯ ಭೌತ ವಿಜ್ಞಾನ, ರಸಾಯನ ವಿಜ್ಞಾನ, ಗಣಿತ ಹಾಗೂ ಜೀವ ವಿಜ್ಞಾನ ವಿಷಯಗಳ ಪಠ್ಯಕ್ರಮವನ್ನು ವೆಬ್ಸೈಟ್ ನಲ್ಲಿ ಹಾಕಿದ್ದು, ಅದನ್ನು ನೋಡಿಕೊಂಡೇ ಪರೀಕ್ಷೆಗೆ ತಯಾರಿ ನಡೆಸಿಕೊಳ್ಳಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನು ಪಿಯು ಕಾಲೇಜುಗಳ ವಿಷಯ ತಜ್ಞರಿಂದಲೂ ಪರಿಶೀಲನೆ ಮಾಡಿಸಲಾಗಿದೆ ಎಂದರು.