ಶ್ರೀ ಎಸ್ ನಂಜುಂಡಯ್ಯ, ಚಾಮರಾಜನಗರ, ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಆಯ್ಕೆ
ಶ್ರೀ ಎಸ್ ನಂಜುಂಡಯ್ಯ, ಚಾಮರಾಜನಗರ, ಕನ್ನಡ ಭವನ ಜಿಲ್ಲಾಧ್ಯಕ್ಷರಾಗಿ ಆಯ್ಕೆ
ಕಾಸರಗೋಡು :ಸಂಘಟಕ, ಸಾಹಿತಿ ಶಿಕ್ಷಕ, ಸಾಹಿತ್ಯ ಪರಿಷತ್, ಜಾನಪದ ಪರಿಷತ್ ಮೊದಲಾಗಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯ ಹೆಚ್ಚಿನ ಸಂಘ, ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ ಸಕ್ರಿಯರಾಗಿರುವ ಶ್ರೀ ಎಸ್, ನಂಜುಂಡಯ್ಯ ಚಾಮರಾಜನಗರ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಚಾಮರಾಜನಗರ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಭವನದ ರಜತ ಸಂಭ್ರಮ ವರ್ಷವಾದ 2025 ರಲ್ಲಿ ಕರ್ನಾಟಕ ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸದುದ್ದೇಶದಿಂದ ಎಲ್ಲ ಜಿಲ್ಲೆಗಳಲ್ಲಿ ಘಟಕ ಸ್ಥಾಪಿಸಲಾಗುತ್ತಿದೆ. ಕನ್ನಡ ಭವನದ ಕರ್ನಾಟಕ ರಾಜ್ಯ ಸಂಚಾಲಕರಾದ ಡಾ. ಟಿ ತ್ಯಾಗರಾಜ್ ಮೈಸೂರು ಎಸ್. ನಂಜುಂಡಯ್ಯನವರ ನಾಮ ನಿರ್ದೇಶನ ಮಾಡಿದರು. ಇನ್ನೊರ್ವ ಕರ್ನಾಟಕ ರಾಜ್ಯ ಸಂಚಾಲಕರಾದ ಬಿ. ಶಿವಕುಮಾರ್ ಕೋಲಾರ ಅನುಮೋದಿಸಿದರು. ಸರ್ವಾನುಮತಿಯೊಂದಿಗೆ ಆಯ್ಕೆಯಾದ ಶ್ರೀ ಎಸ್. ನಂಜುಂಡಯ್ಯ ಇವರು ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ. 20000 ಪುಸ್ತಕಗಳುಳ್ಳ ಸಾರ್ವಜನಿಕ ವಾಚನಾಲಯ, ಕರ್ನಾಟಕದಿಂದ ಕಾಸರಗೋಡು ಪ್ರದೇಶಕ್ಕೆ ಆಗಮಿಸುವ ಸಾಹಿತ್ಯ ಸಾಂಸ್ಕೃತಿಕ ಯಾತ್ರಾರ್ಥಿಗಳಿಗೆ “ಉಚಿತ ವಸತಿ ಸೌಕರ್ಯ “ಪ್ರತಿ ಮನೆಗೊಂದು ಗ್ರಂಥಾಲಯ -ಎಂಬ ಜನಾಂದೋಲನ ವಿನೂತನ ಕಾರ್ಯಕ್ರಮ, ಹಾಗೂ ರಜತ ಸಂಭ್ರಮ ವಿಶೇಷ ಕಾರ್ಯಕ್ರಮ ಸಂಘಟನೆ, ಸಂಯೋಜನೆಯಲ್ಲಿ ಘಟಕ ವಿಸ್ತರಿಸಿ ಕಾರ್ಯ ಪ್ರವಿತ್ತರಾಗಬೇಕೆಂದು ಕನ್ನಡ ಭವನದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಸಂಚಾಲಕಿಯಾದ ಸಂದ್ಯಾ ರಾಣಿ ಟೀಚರ್ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.