ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆ: ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸೂಚನೆ
ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆ: ಕೆಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸೂಚನೆ
ಬೆಂಗಳೂರಿನಲ್ಲಿ ಇಂದು ಭಾನುವಾರ ಬೆಳ್ಳಂಬೆಳಗ್ಗೆ ಚಳಿ ಮಧ್ಯೆ ಮಳೆಯೂ ಬಂದಿದ್ದು, ಬೆಳಗ್ಗೆಯಿಂದಲೇ ಜಿಟಿಜಿಟಿ ಮಳೆ ಸುರಿಯುತ್ತಿದ್ದು ಈಗ ದಟ್ಟ ಮೋಡ ಕವಿದ ವಾತಾವರಣವಿದೆ. ಇನ್ನು ಕೆಲ ದಿನಗಳವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ, ಮೆಜೆಸ್ಟಿಕ್, ವಿಧಾನಸೌಧ, ಜೆಪಿನಗರ, ರಿಚ್ಮಂಡ್ ವೃತ್ತ, ಟೌನ್ಹಾಲ್ ಸೇರಿದಂತೆ ಬಹುತೇಕ ಕಡೆ ಮಳೆಯಾಗಿದೆ.ಅದೇ ರೀತಿ ರಾಜ್ಯದ ಕರಾವಳಿ ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ರಾಮನಗರಗಳಲ್ಲಿ ಕೂಡ ಇನ್ನೊಂದು ವಾರದವರೆಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.