ಸೋಮವಾರ ಅಮೆರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಕಾರ್ಯಕ್ರಮ
ಸೋಮವಾರ ಅಮೆರಿಕಾದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಕಾರ್ಯಕ್ರಮ
ವಾಷಿಂಗ್ಟನ್: ಅಮೆರಿಕಾದ 47 ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿದೇಶಿ ಗಣ್ಯರು, ಸೆಲೆಬ್ರಿಟಿಗಳು ಮತ್ತು ಕಂಪೆನಿಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಭಾರತದ ವಿದೇಶಾಂಗ ಸಚಿವ ಎಸ್. ಜಯಶಂಕರ್ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಅರ್ಜೆಂಟೀನಾ ಅಧ್ಯಕ್ಷ ಜೇವಿಯರ್ ಮಿಲಿ, ಹಂಗೇರಿಯನ್ ಪ್ರಧಾನಿ ವಿಕ್ಟರ್ ಓರ್ಬನ್, ಜಪಾನಿನ ವಿದೇಶಾಂಗ ಸಚಿವ ಟಕೇಶಿ ಇವಾಯಾ ಅವರು ಭಾಗವಹಿಸಲಿದ್ದಾರೆ.