ಕೊಪ್ಪಳ: ಬಂಕಾಪುರಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ತೋಳ
ಕೊಪ್ಪಳ: ಬಂಕಾಪುರಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ತೋಳ
ಕೊಪ್ಪಳ: ಕೊಪ್ಪಳ ಜಿಲ್ಲೆಯ ಬಂಕಾಪುರ ತೋಳ ಧಾಮದಲ್ಲಿ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಬಂಕಾಪುರ ತೋಳ ಧಾಮವು, ಚಿರತೆ,ನವಿಲು, ತೋಳ, ಕತ್ತೆ ಕಿರುಬ, ನರಿ,ಮೊಲ, ಮುಳ್ಳುಹಂದಿ ಮೊದಲಾದ ವನ್ಯಜೀವಿಗಳ ತಾಣವಾಗಿದೆ.
ಇಂಡಿಯನ್ ಗ್ರೇ ಉಲ್ಫ್ ಎಂಬ ಪ್ರಭೇದದ ತೋಳಗಳು ಈ ಪ್ರದೇಶದಲ್ಲಿದ್ದು, ಇತ್ತೀಚೆಗೆ 8 ಮರಿಗಳಿಗೆ ತೋಳವೊಂದು ಜನ್ಮ ನೀಡಿದೆ. ಇವುಗಳ ಪೈಕಿ ಸಾಮಾನ್ಯವಾಗಿ ಶೇಕಡ 50ರಷ್ಟು ಬದುಕಿ ಉಳಿಯುವ ಸಾಧ್ಯತೆ ಇರುತ್ತದೆ ಆದರೆ ಎಲ್ಲ ತೋಳದ ಮರಿಗಳನ್ನೂ ಉಳಿಸಲು ಅರಣ್ಯ ಅಧಿಕಾರಿಗಳು ಕ್ರಮವಹಿಸಿದ್ದಾರೆ ಎಂದು ತಿಳಿಸಿದ್ದಾರೆ.