ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ಗೌರವ ಡಾಕ್ಟರೇಟ್ ಪಡೆದ ಸಾಧು ಕೋಕಿಲ
ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ಗೌರವ ಡಾಕ್ಟರೇಟ್ ಪಡೆದ ಸಾಧು ಕೋಕಿಲ
ಮೈಸೂರು : ಸಂಗೀತ ಕ್ಷೇತ್ರದಲ್ಲಿನ ಸಾಧನೆ, ಸೇವೆಗಳನ್ನು ಗುರುತಿಸಿ ಚಲನಚಿತ್ರ ನಟ, ಖ್ಯಾತ ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರಿಗೆ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
‘ ಸಂಗೀತ ಕ್ಷೇತ್ರದಲ್ಲಿನ ನನ್ನ ಸಾಧನೆ, ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಿದ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನನ್ನ ಧನ್ಯವಾದಗಳು. ಈ ನನ್ನ ಸಂಗೀತ ಪಯಣದಲ್ಲಿ ಬೆಂಬಲವಾಗಿ ನಿಂತ ಎಲ್ಲ ಸಂಗೀತ ಪ್ರೇಮಿಗಳು ಮತ್ತು ಹಿತೈಷಿಗಳಿಗೆ ನನ್ನ ಅನಂತಾನಂತ ವಂದನೆಗಳು.’ ಎಂಬ ಕ್ಯಾಪ್ಚನ್ ಜೊತೆಗೆ ಸಾಧು ಕೋಕಿಲ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ