ಕೊಡಗು: ಹುಲಿ ದಾಳಿಗೆ ಎರಡು ಹಸುಗಳು ಬಲಿ
ಕೊಡಗು: ಹುಲಿ ದಾಳಿಗೆ ಎರಡು ಹಸುಗಳು ಬಲಿ
ಕೊಡಗು: ಕೊಡಗು ಜಿಲ್ಲೆಯಲ್ಲಿ ಹುಲಿಗಳ ಅಟ್ಟಹಾಸ ಮುಂದುವರಿದಿದ್ದು, ಇದೀಗ ಹುಲಿ ದಾಳಿಗೆ ಎರಡು ಹಸುಗಳು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಸುಳುಗೋಡು ಗ್ರಾಮದಲ್ಲಿ ನಡೆದಿದೆ. ದಿನು ಎಂಬವರಿಗೆ ಸೇರಿದ ಎರಡು ಹಸುಗಳನ್ನು ಹುಲಿ ದಾಳಿ ಮಾಡಿದೆ.
ಸದ್ಯ ಆನೆಗಳ ಮೂಲಕ ಹುಲಿ ಸೆರೆ ಕಾರ್ಯಾಚರಣೆ ಸಿದ್ಧತೆಗೆ ಅರಣ್ಯ ಇಲಾಖೆಯ ಸಿಬ್ಬಂದಿ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.