ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಂತಿನಗರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಂಚ್ ಡೆಸ್ಕ್ ಹಸ್ತಾಂತರ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಾಂತಿನಗರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಂಚ್ ಡೆಸ್ಕ್ ಹಸ್ತಾಂತರ
ಕಡಬ ತಾಲೂಕಿನ ಗೋಳಿತೊಟ್ಟು ವಲಯದ ಶಾಂತಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಒದಗಿಸಲಾದ ಬೆಂಚ್ ಡೆಸ್ಕ್ ನ ಹಸ್ತಾಂತರವನ್ನು ದ. ಕ. ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು, ಶಾಂತಿನಗರ ಒಕ್ಕೂಟದ ಅಧ್ಯಕ್ಷರಾದ ಮಹೇಶ್ ಪಾತ್ರಪಾಡಿ, ಎಸ್ .ಡಿ.ಎಂ.ಸಿ ಅಧ್ಯಕ್ಷರಾದ ಪುರುಷೋತ್ತಮ, ವಲಯ ಮೇಲ್ವಿಚಾರಕರಾದ ಜಯಶ್ರೀ ಮತ್ತು ಸೇವಾ ಪ್ರತಿನಿಧಿಗಳು ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.