ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು
ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು
ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನ ಬಿದಿರುತಳ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಹೊತ್ತಿಕೊಂಡಿದ್ದು, ನೂರಾರು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸಿದೆ. ಪ್ರಾಣಿ ಸೇರಿದಂತೆ ಅಪರೂಪದ ಸಸ್ಯ ಸಂಪತ್ತುಗಳು ನಾಶವಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ ಎಂದು ವರದಿಯಾಗಿದೆ.