ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ತೀರ್ಪು ತೃಪ್ತಿ ತಂದಿಲ್ಲ – ಮಮತಾ ಬ್ಯಾನರ್ಜಿ

ವೈದ್ಯೆ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ: ತೀರ್ಪು ತೃಪ್ತಿ ತಂದಿಲ್ಲ – ಮಮತಾ ಬ್ಯಾನರ್ಜಿ
ಕೊಲ್ಕತ್ತಾ : ದೇಶಾದ್ಯಂತ ಭಾರೀ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿದ್ದ ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಏಕೈಕ ಅಪರಾಧಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ ಬಗ್ಗೆ ಪಶ್ಚಿಮ ಬಂಗಾಳದ ಪ್ರಧಾನ ಮಂತ್ರಿ ಮಮತಾ ಬ್ಯಾನರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಪರಾಧಿ ಸಂಜಯ್ ರಾಯ್ ಗೆ ಸಿಬಿಐ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದ ಬಗ್ಗೆ ಅವರು, ನಾವೆಲ್ಲರೂ ಅಪರಾಧಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ದೆವು. ಆದರೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ನೀಡಿದೆ. ಈ ಪ್ರಕರಣವನ್ನು ನಮ್ಮಿಂದ ಬಲವಂತವಾಗಿ ಕಸಿದುಕೊಳ್ಳಲಾಗಿದೆ ಎಂದರು.
