ನಾಳೆಯಿಂದ 3 ದಿನಗಳ ಕಾಲ ಭರ್ಜರಿ ಮಳೆ: ಹವಾಮಾನ ಇಲಾಖೆ
ನಾಳೆಯಿಂದ 3 ದಿನಗಳ ಕಾಲ ಭರ್ಜರಿ ಮಳೆ: ಹವಾಮಾನ ಇಲಾಖೆ
ಬೆಂಗಳೂರು: ರಾಜ್ಯದಲ್ಲಿ ಚಳಿ ಮಧ್ಯೆಯೂ ಮಳೆ ಮುಂದುವರಿಯಲಿದೆ, ನಾಳೆಯಿಂದ 3 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ, ಕರಾವಳಿ ಜಿಲ್ಲೆಗಳಲ್ಲಿಯೂ ನಾಳೆಯಿಂದ ಮಳೆಯಾಗುವ ಮುನ್ಸೂಚನೆ ಇದೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.