ಆಂಗ್ಲರ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
ಆಂಗ್ಲರ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
ಕೊಲ್ಕತ್ತಾ: ಈಡನ್ ಗಾರ್ಡನ್ ನಲ್ಲಿ ನಡೆದ T20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಹೀನಾಯವಾಗಿ ಸೋಲಿಸಿ ಭರ್ಜರಿ ಗೆಲುವು ಸಾಧಿಸಿದೆ.
ಇಂಗ್ಲೆಂಡ್ ನೀಡಿದ್ದ 133 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಸೂರ್ಯ ಮತ್ತು ತಂಡ ಕೇವಲ 12.5 ಓವರ್ ನಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿದೆ.
ಭಾರತದ ಪರ ಸ್ಫೋಟಕ ಬ್ಯಾಟಿಂಗ್ ಮಾಡಿದ ಅಭಿಷೇಕ್ ಶರ್ಮಾ ತಂಡಕ್ಕೆ ಸುಲಭ ಜಯ ತಂದು ಕೊಟ್ಟರು.
ಈ ಮೂಲಕ 5 ಪಂದ್ಯಗಳ T20 ಸರಣಿಯಲ್ಲಿ ಭಾರತ ತಂಡ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ.