ಗಣರಾಜ್ಯೋತ್ಸವ ಪರೇಡ್ 2025ರ ಪಥಸಂಚಲನಕ್ಕೆ ಸಿದ್ಧವಾಗಿದೆ ‘ಲಕ್ಕುಂಡಿ ಶಿಲ್ಪಕಲೆ’
ಗಣರಾಜ್ಯೋತ್ಸವ ಪರೇಡ್ 2025ರ ಪಥಸಂಚಲನಕ್ಕೆ ಸಿದ್ಧವಾಗಿದೆ ‘ಲಕ್ಕುಂಡಿ ಶಿಲ್ಪಕಲೆ’
ಹುಬ್ಬಳ್ಳಿ: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಾಲ್ಗೊಳ್ಳಲು ಲಕ್ಕುಂಡಿ ಶಿಲ್ಪಕಲೆ ಸಂಪೂರ್ಣವಾಗಿ ಸಿದ್ಧಗೊಂಡಿದೆ. ಈ ಶಿಲ್ಪಕಲೆ ರಾಷ್ಟ್ರ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್) ಇದೇ 26ರಂದು ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ, ಸರ್ವಧರ್ಮ ಸಮನ್ವಯ, ಶಾಂತಿ, ಸಹಬಾಳ್ವೆಯನ್ನು ಪ್ರತಿಪಾದಿಸಲಿದೆ,
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು, ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರತಿ ವರ್ಷ ತನ್ನ ವಿಶಿಷ್ಟ ಸ್ತಬ್ಧಚಿತ್ರಗಳ ಮೂಲಕ ದೇಶದ ಗಮನ ಸೆಳೆಯುತ್ತಿದೆ. ಈ ಬಾರಿ ಲಕ್ಕುಂಡಿಯ ಶಿಲ್ಪಕಲೆಯಿಂದ ಕೂಡಿರುವ ಐತಿಹಾಸಿಕ ದೇವಾಲಯಗಳು ಎಲ್ಲರನ್ನು ಮಂತ್ರಮುಗ್ಧರನ್ನಾಗಿಸಲು ಹೊರಟಿದೆ ಎಂದು ಹೇಳಿದರು.