ಸಕಲೇಶಪುರ: ಶಾಲೆಗೆ ಹೋಗುವುದಾಗಿ ಹೇಳಿ ತೆರಳಿದ್ದ ಮೂವರು ವಿದ್ಯಾರ್ಥಿಗಳು ನಾಪತ್ತೆ
ಸಕಲೇಶಪುರ: ಶಾಲೆಗೆ ಹೋಗುವುದಾಗಿ ಹೇಳಿ ತೆರಳಿದ್ದ ಮೂವರು ವಿದ್ಯಾರ್ಥಿಗಳು ನಾಪತ್ತೆ
ಹಾಸನ: ಶಾಲೆಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಮೂವರು ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುನಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾಗಿರುವ ಮೂವರು ವಿದ್ಯಾರ್ಥಿಗಳು ಕುನಿಗನಹಳ್ಳಿ ಗ್ರಾಮದ ಧರ್ಮ ಪ್ರಕಾಶ್, ಮನು ಮತ್ತು ಕಿರುಹುಣಸೆ ಗ್ರಾಮದ ಮಹೇಂದ್ರ ಎಂಬುವವರ ಮಕ್ಕಳಾಗಿದ್ದು,
ನಾಪತ್ತೆಯಾಗಿರುವ ಮೂವರು ವಿದ್ಯಾರ್ಥಿಗಳನ್ನು ಶರತ್(16), ಧನಂಜಯ್(16) ಮುರುಳಿ(16) ಎಂದು ಗುರುತಿಸಲಾಗಿದೆ. ಇದೀಗ ಪೋಷಕರು ತಮ್ಮ ಮಕ್ಕಳನ್ನು ಹುಡುಕಿ ಕೊಡುವಂತೆ ಸಕಲೇಶಪುರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.