UPSC ನಾಗರಿಕ ಸೇವೆಗಳ ಪರೀಕ್ಷೆಯ ಅಧಿಸೂಚನೆ ಬಿಡುಗಡೆ
UPSC ನಾಗರಿಕ ಸೇವೆಗಳ ಪರೀಕ್ಷೆಯ ಅಧಿಸೂಚನೆ ಬಿಡುಗಡೆ :ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 11
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಜನವರಿ 22ರಂದು ನಾಗರಿಕ ಸೇವೆಗಳ ಪರೀಕ್ಷೆಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತೀಯ ಆಡಳಿತ ಸೇವೆ, ಭಾರತೀಯ ಅರಣ್ಯ ಸೇವೆ ಮತ್ತಿತರ ಪ್ರತಿಷ್ಠಿತ ಸೇವೆಗಳಲ್ಲಿ ವೃತ್ತಿ ಜೀವನವನ್ನು ಮಾಡಲು ಬಯಸುವ ಅಭ್ಯರ್ಥಿಗಳಿಗೆ ಈ ಪರೀಕ್ಷೆಯು ಒಂದು ಪ್ರಮುಖ ಅವಕಾಶವಾಗಿದೆ.
ಅಭ್ಯರ್ಥಿಗಳು UPSC ಯ upsc.gov.in ಎಂಬ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಆನ್ಲೈನ್ ನಲ್ಲಿ ನೋಂದಾಯಿಸಿಕೊಳ್ಳಬಹುದು.
ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 11 ಆಗಿದೆ.