ಕೇಂದ್ರ ಬಜೆಟ್ ಮಂಡನೆಯಲ್ಲಿ ಎಲ್‌ಪಿಜಿ ಸಬ್ಸಿಡಿ ಹೆಚ್ಚಳದ ಘೋಷಣೆ ಸಾಧ್ಯತೆ
ಕೇಂದ್ರ ಬಜೆಟ್ ಮಂಡನೆಯಲ್ಲಿ ಎಲ್‌ಪಿಜಿ ಸಬ್ಸಿಡಿ ಹೆಚ್ಚಳದ ಘೋಷಣೆ ಸಾಧ್ಯತೆ
ಕೇಂದ್ರ ಬಜೆಟ್ ಮಂಡನೆಗೆ ಇನ್ನು ಕೆಲವು ದಿನಗಳಷ್ಟೇ ಬಾಕಿ ಇವೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ.
2025-26ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಆಹಾರ, ರಸಗೊಬ್ಬರ ಮತ್ತು ಅಡುಗೆ ಅನಿಲ ಸಿಲಿಂಡರ್ ಗೆ ನೀಡುವ ಸಬ್ಸಿಡಿ ಮೊತ್ತವನ್ನು ಶೇಕಡ 8ರಷ್ಟು ಹೆಚ್ಚಿಸುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.
ಕಳೆದ ಹಣಕಾಸು ವರ್ಷದಲ್ಲಿ ಸರಕಾರ ಆಹಾರಕ್ಕೆ 2,00,000 ಕೋಟಿ ರೂಪಾಯಿ ಸಬ್ಸಿಡಿ ನೀಡಿತ್ತು. ಇದನ್ನು ಈ ಬಾರಿ 2.14 ಲಕ್ಷ ಕೋಟಿ ರೂಪಾಯಿಗೆ ಏರಿಸುವ ಸಾಧ್ಯತೆಗಳಿವೆ.