• 15 ಫೆಬ್ರವರಿ 2025

ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ!ಕಾರಣ ಇಲ್ಲಿದೆ

 ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ!ಕಾರಣ ಇಲ್ಲಿದೆ
Digiqole Ad

ಅರಣ್ಯದಲ್ಲಿ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ!ಕಾರಣ ಇಲ್ಲಿದೆ 

ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಪ್ರದೇಶಗಳಲ್ಲಿ ಈಗಿನಿಂದ ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣ ಮಾಡಲು ಸರ್ಕಾರದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಈ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ, ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಈ ರೀತಿ ಚಿತ್ರೀಕರಣಗಳನ್ನು ನಡೆಸಲು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ನಿಗದಿತ ಶುಲ್ಕವನ್ನು ಸ್ವೀಕರಿಸಿ ಅನುಮತಿ ನೀಡುತ್ತಾರೆ. ಇಷ್ಟೇ ಅಲ್ಲದೆ, ಸ್ಥಳೀಯ ಮಟ್ಟದ ಅಧಿಕಾರಿಗಳು ಸಹ ಅನುಮತಿ ನೀಡುತ್ತಾರೆ, ಇದರಿಂದ ಅರಣ್ಯ ಪ್ರದೇಶದ ಗುಪ್ತ ಮಾಹಿತಿಗಳು ಹೊರಗಿನವರ ಕೈಗೆ ಹೋಗುವ ಸಾಧ್ಯತೆ ಇದೆ. ಇದರಿಂದ ಪರಿಸರ ಮತ್ತು ಜೀವ ವೈವಿಧ್ಯ ಮೇಲೆ ಹಾನಿ ಆಗಬಹುದು ಎಂದು ಅವರು ವಿವರಿಸಿದ್ದಾರೆ.

ಅರಣ್ಯ ಹಾಗೂ ವನ್ಯಜೀವಿಗಳನ್ನು ರಕ್ಷಿಸುವ ಮೂಲಕ, ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಮತ್ತು ಪ್ರಕೃತಿಯನ್ನು ಹಸ್ತಾಂತರಿಸುವ ಉದ್ದೇಶದಿಂದ, ರಾಜ್ಯದ ಎಲ್ಲ ಅರಣ್ಯ ಪ್ರದೇಶಗಳಲ್ಲಿ ಚಿತ್ರೀಕರಣಕ್ಕೆ ಮೊದಲನೆಯದಾಗಿ ಸರ್ಕಾರದಿಂದ ಅನುಮತಿ ಪಡೆಯಲು ಕಡ್ಡಾಯವಾಗುತ್ತದೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ