ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಪ್ರಯುಕ್ತ ಇಂದು ಜನಿಸಿದ ಹೆಣ್ಣು ಮಗುವಿಗೆ ಸರಕಾರದಿಂದ ವಿಶೇಷ ಬಹುಮಾನ
Baby feet in mother hands. Tiny Newborn Baby’s feet on female Shaped hands closeup. Mom and her Child. Happy Family concept. Beautiful conceptual image of Maternity
ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಪ್ರಯುಕ್ತ ಇಂದು ಜನಿಸಿದ ಹೆಣ್ಣು ಮಗುವಿಗೆ ಸರಕಾರದಿಂದ ವಿಶೇಷ ಬಹುಮಾನ
ಬೆಂಗಳೂರು: ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣುಶಿಶುಗಳಿಗೆ ವಿಶೇಷ ಉಡುಗೊರೆ ನೀಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ಸಾವಿರ ರೂ. ಬೆಲೆಯ ಮಕ್ಕಳ ಕಿಟ್‌ಗಳನ್ನು ಉಡುಗೊರೆಯಾಗಿ ನೀಡಲು ಆರೋಗ್ಯ ಇಲಾಖೆಯು ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದೆ.
ಆರೋಗ್ಯ ಇಲಾಖೆಯು ಜ. 24ರಂದು ರಾಜ್ಯದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಯನ್ನು ವಿಶಿಷ್ಟವಾಗಿ ಆಚರಿಸಲು ಮುಂದಾಗಿದೆ. ಹೆಣ್ಣುಮಕ್ಕಳ ಲಿಂಗಾನುಪಾತವನ್ನು ಹೆಚ್ಚಿಸುವು ದರ ಜತೆಗೆ ಹೆಣ್ಣುಭ್ರೂಣ ಹತ್ಯೆಯನ್ನು ಹೋಗ ಲಾಡಿಸಲು ಹಲವು ಕಾರ್ಯಕ್ರಮಗಳನ್ನು ಹಾಕಿ ಕೊಂಡಿದೆ. ಸಚಿವ ದಿನೇಶ್ ಗುಂಡೂರಾವ್ ಈ ಕುರಿತು ಮಾತನಾಡಿ, ಹೆಣ್ಣುಮಗು ಎದುರಿಸುತ್ತಿರುವ ಎಲ್ಲ ಅಸಮಾನತೆಗಳ ಬಗ್ಗೆ ದಿನಾಚರಣೆಯ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಹೆಣ್ಣನ್ನು ಪೂಜ್ಯ ಭಾವನೆಯಿಂದ ನೋಡಬೇಕು. ಲಿಂಗ ಪತ್ತೆ ಮತ್ತು ಗರ್ಭಪಾತ ನಡೆಸುವ ಎಲ್ಲ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ಮತ್ತು ಹೆಣ್ಣು ಮಗುವಿನ ಮೌಲ್ಯದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಪಿಸಿಪಿಎನ್‌ಡಿಟಿ ಕಾಯ್ದೆಯನ್ನು ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.