• 15 ಫೆಬ್ರವರಿ 2025

ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ ನಿಧನ

 ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ ನಿಧನ
Digiqole Ad

ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ ನಿಧನ

ಮಂಗಳೂರು: ಹಿರಿಯ ಪತ್ರಕರ್ತ ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

 ಅವರು 26 ವರ್ಷಗಳ ಕಾಲ ಹೊಸ ದಿಗಂತ ಪತ್ರಿಕೆಯ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು. ಮಂಗಳೂರು ಮಿತ್ರ, ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು.

 ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.

 ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Digiqole Ad

ಈ ಸುದ್ದಿಗಳನ್ನೂ ಓದಿ