ವಿಧಾನಸೌಧದಲ್ಲಿ ಪುಸ್ತಕ ಮತ್ತು ಸಾಹಿತ್ಯ ಮೇಳ ಆಯೋಜನೆ: ಸ್ಪೀಕರ್ ಯು. ಟಿ ಖಾದರ್
ವಿಧಾನಸೌಧದಲ್ಲಿ ಪುಸ್ತಕ ಮತ್ತು ಸಾಹಿತ್ಯ ಮೇಳ ಆಯೋಜನೆ: ಸ್ಪೀಕರ್ ಯು. ಟಿ ಖಾದರ್
ಬೆಂಗಳೂರು: ವಿಧಾನಸೌಧ ಆವರಣದಲ್ಲಿ ಪುಸ್ತಕ ಮತ್ತು ಸಾಹಿತ್ಯ ಮೇಳವನ್ನು ಆಯೋಜನೆ ಮಾಡಲು ತೀರ್ಮಾನಿಸಲಾಗಿದೆ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಫೆಬ್ರವರಿ 28, ಮಾರ್ಚ್ 1 ಮತ್ತು 2 ರಂದು ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ ಆಯೋಜನೆ ಮಾಡಲಾಗಿದೆ, ಪುಸ್ತಕ ಮೇಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ಸಾರ್ವಜನಿಕರಿಗೆ ಮುಕ್ತ ಪ್ರವೇಶಾವಕಾಶ ಇರಲಿದೆ.
ಮಾರ್ಚ್ 3ರಂದು ಜಂಟಿ ಅಧಿವೇಶನ ನಡೆಯಲಿದೆ. ಅಂದು ರಾಜ್ಯಪಾಲರ ಭಾಷಣ ಇರುವುದರಿಂದ ಮಧ್ಯಾಹ್ನದ ಬಳಿಕ ಪುಸ್ತಕ ಮೇಳಕ್ಕೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದರು.