• 7 ಫೆಬ್ರವರಿ 2025

ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ

 ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ
Digiqole Ad

ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ

ಬೆಂಗಳೂರು: ಝೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನರಾಗಿದ್ದಾರೆ. ಅವರು ಮಧುಗಿರಿ ತಾಲೂಕಿನ ಡಿ.ವಿ ಹಳ್ಳಿಯ ಗ್ರಾಮದವರು.

 ಅನಾರೋಗ್ಯದಿಂದ ಬಳಲುತ್ತಿದ್ದ ಮಂಜಮ್ಮ ಅವರಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಮಂಜಮ್ಮ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

 ಮಂಜಮ್ಮ ಅವರಿಗೆ ರತ್ನಮ್ಮ ಅನ್ನೋ ಸಹೋದರಿ ಇದ್ದಾರೆ.

 ಇವರಿಬ್ಬರು ದಂಡಿನ ಮಾರಮ್ಮ ದೇವಸ್ಥಾನದ ಮುಂದೆ ಹಾಡಿ ಹೇಳಿ ರಂಜಿಸುತ್ತಿದ್ದರು. ಇದೀಗ ಮಂಜಮ್ಮ ನಿಧನ ಹಿನ್ನೆಲೆಯಲ್ಲಿ ಸಹೋದರಿ ರತ್ನಮ್ಮ ಅವರ ಬದುಕು ಮತ್ತಷ್ಟು ಸಂಕಷ್ಟಕ್ಕೆ  ಸಿಲುಕಿದೆ.

Digiqole Ad

ಈ ಸುದ್ದಿಗಳನ್ನೂ ಓದಿ