ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ
ಬೆಂಗಳೂರು: ನಮ್ಮ ಮೆಟ್ರೋ ರೈಲು ಟಿಕೆಟ್ ದರ ಹೆಚ್ಚಳಕ್ಕೆ ಮುಂದಾಗಿದ್ದ ಬಿಎಂಆರ್‌ಸಿಎಲ್ ಇದೀಗ ಆ ವಿಚಾರಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ. ಮೆಟ್ರೋ ಟಿಕೆಟ್ ದರ ಹೆಚ್ಚಳ ಸಂಬಂಧಿಸಿ ಕೇಂದ್ರ ಸರಕಾರ ವರದಿ ಕೇಳಿದ್ದು, ಸದ್ಯದ ಮಟ್ಟಿಗೆ ಅನುಮತಿ ಕೊಟ್ಟಿಲ್ಲ.
ಹೀಗಾಗಿ ಮೆಟ್ರೋ ಟಿಕೆಟ್ ದರ ಏರಿಕೆ ಈ ವರ್ಷ ಅನುಮಾನ ಎಂದು ಮೂಲಗಳು ತಿಳಿಸಿವೆ, ಈ ಮೂಲಕ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ವಾರವಷ್ಟೇ ಟಿಕೆಟ್ ದರ ಏರಿಕೆ ಸಂಬಂಧ ಬಿಎಂಆರ್‌ಸಿಎಲ್ ಸಭೆ ನಡೆಸಿತ್ತು. ಶೇಕಡ 45 ರಷ್ಟು ಟಿಕೆಟ್ ದರ ಹೆಚ್ಚಳ ಮಾಡಲು ನಿರ್ಧರಿಸಿತ್ತು. ಇದೀಗ ಬಿಎಂಆರ್‌ಸಿಎಲ್ ನಿರ್ಧಾರಕ್ಕೆ ಕೇಂದ್ರದಿಂದ ತಾತ್ಕಾಲಿಕ ತಡೆಯೊಡ್ಡಲಾಗಿದೆ.